ಐಸಿಯು ಬೆಡ್ ಗಳ ಸಮಸ್ಯೆ ಇದೆ, ಬೆಂಗಳೂರಿನಲ್ಲಿ ಕಠಿಣ ಕ್ರಮ ಅನಿವಾರ್ಯ : ಸಚಿವ ಡಾ.ಕೆ.ಸುಧಾಕರ್

kannada t-shirts

ಬೆಂಗಳೂರು,ಏಪ್ರಿಲ್,18,2021(www.justkannada.in) : ಐಸಿಯು ಬೆಡ್ ಗಳ ಸಮಸ್ಯೆ ಇದೆ. ಐಸಿಯು ಬೆಡ್ ಗಳ ಸಮಸ್ಯೆ ಇಲ್ಲವೆಂದು ನಾನು ಹೇಳಲ್ಲ. ಜೋನಲ್ ನೋಡಲ್ ಅಧಿಕಾರಿ ನೇಮಕ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.jk

ಕೊರೊನಾ ಪ್ರಕರಣಗಳ ಹೆಚ್ಚಳ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕಠಿಣ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ. ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂಬ ವಿಚಾರವನ್ನು ಕೇಂದ್ರ ಸರ್ಕಾರವೇ ಹೇಳಿದ್ದು, ಈ ವಿಚಾರ ನಮ್ಮ ಗಮನಕ್ಕೂ ಬಂದಿದೆ ಎಂದು ಮಾಹಿತಿ ನೀಡಿದರು.

ನಾಳೆ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ನಾಳೆ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದರು.

ತಜ್ಞರು ನೀಡಿದ ವರದಿಯ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ ಸಲಹೆ ಪಡೆಯುತ್ತೇನೆ. ರಾಜ್ಯಪಾಲರನ್ನು ಭೇಟಿ ಮಾಡಿ ಸಲಹೆ ಪಡೆದಿದ್ದು, ಎಲ್ಲ ಮಾಹಿತಿ ನೀಡಿ ಸಿಎಂ ಸಲಹೆ ಪಡೆಯಲಾಗುವುದು.  problem-ICU-beds-Strict-action-inevitable-Bangalore-Minister-Dr.K.Sudhakar 

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಖಾಸಗಿಯವರು ಹಣ ಪಾವತಿ ಮಾಡದಿರುವುದರಿಂದ ಅವರಿಗೆ ಕೊರತೆ ಆಗಿರಬಹುದು. ನಾನು ಅಸೋಸಿಯೇಷನ್ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

key words : problem-ICU-beds-Strict-action-inevitable-Bangalore-Minister-Dr.K.Sudhakar

website developers in mysore