ಜಿಲ್ಲೆಯಲ್ಲಿ ಮದುವೆ, ಸಮಾರಂಭ ನಿಷೇಧಿಸಿ:  ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಬರೆದು ಕುರುಬೂರು ಶಾಂತಕುಮಾರ್ ಒತ್ತಾಯ….

Promotion

ಮೈಸೂರು,ಜು,8,2020(www.justkannada.in): ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಮದುವೆ ಸಮಾರಂಭ ನಿಷೇಧ ಮಾಡುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತದೆ. ಜತೆಗೆ ಜಿಲ್ಲೆಯಲ್ಲಿ ಸಾವು ನೋವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಮದುವೆ, ಸಮಾರಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದೆಡೆ ಸೇರುತ್ತಾರೆ. ಇದರಿಂದಾಗಿ ಕೊರೋನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳನ್ನ ನಿಷೇಧಿಸಿ ಎಂದು ಆಗ್ರಹಿಸಿದರು. Prohibit- marriage -ceremony – mysore district-Kuruboor Shanthakumar -DC

ಬಾಗಲಕೋಟೆ ಜಿಲ್ಲಾಡಳಿತ ಕರೊನಾ ನಿಯಂತ್ರಿಸಲು ಮದುವೆ, ಸಮಾರಂಭಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದ ಈ ರೀತಿ ಆದೇಶ ಜಾರಿಗೆ ತಂದರೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತದೆ ಎಂದು ಪತ್ರದಲ್ಲಿ ಕುರುಬೂರು ಶಾಂತಕುಮಾರ್  ಸಲಹೆ ನೀಡಿದ್ದಾರೆ.

Key words: Prohibit- marriage -ceremony – mysore district-Kuruboor Shanthakumar -DC