ಪ್ರಧಾನಿ ಮೋದಿಗೆ ಮಾತು ಕೊಟ್ಟಿದ್ದೇನೆ: ಮುಂದೆಯೂ ಬಿಜೆಪಿ ಅಧಿಕಾರಕ್ಕೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

Promotion

ಬೆಂಗಳೂರು,ಆಗಸ್ಟ್,27,2022(www.justkannada.in):  ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ಮೋದಿ ಅವರಿಗೆ ಈ ಬಗ್ಗೆ ಮಾತು ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು 140 ಸ್ಥಾನವನ್ನ ಗೆಲ್ಲುತ್ತೇವೆ. ಈ ಮೂಲಕ ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಇದನ್ನ ಯಾರೂ ತಡೆಯಲು ಆಗಲ್ಲ ಎಂದರು.

ಭ್ರಷ್ಟಾವರ ತೊಲಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ .  ಕಾಂಗ್ರೆಸ್ ನವರು ಉದ್ಧೇಶಪೂರ್ವಕವಾಗಿ  ಸರ್ಕಾರದ ವಿರುದ್ಧ ಕಮಿಷನ್ ಆರೋಪ  ಮಾಡಿಸಿದ್ದಾರೆ. ಇದು ಸುಳ್ಳು ಆರೋಪ ಅಂತಾ ಜನರಿಗೂ ಗೊತ್ತು.ಕಮಿಷನ್ ಆರೋಪ ಮಾಡಿರವವರು ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

Key words: promised -Prime Minister –Modi-BJP – power-BS Yeddyurappa.