ಚಿಲುಮೆ ಸಂಸ್ಥೆ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್‌ ಗಳ ರಕ್ಷಣೆಗೆ ನೀತಿರುವವರು ಯಾರು? ರಾಜ್ಯ ಕಾಂಗ್ರೆಸ್ ಗುಡುಗು.

kannada t-shirts

ಬೆಂಗಳೂರು,ನವೆಂಬರ್,19,2022(www.justkannada.in):  ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ  ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್‌ಗಳ ರಕ್ಷಣೆಗೆ ನೀತಿರುವವರು ಯಾರು? ಚಿಲುಮೆಗೆ ಯಾರ ಒಲುಮೆ? ಬರ್ತ್‌ಡೇ ಪಾರ್ಟಿಗೆ ಹೋಗಿದ್ದ ಕ್ಯಾಷ್‌ ಅಲ್ಲೇ ಅಭಿವೃದ್ಧಿಯಾದ ಸಚಿವರೇ? ಜನಕ್ರೋಶದಿಂದ ಖಾಲಿ ಕುರ್ಚಿ ದರ್ಶನ ಪಡೆಯುತ್ತಿರುವ ಬಿಜೆಪಿ ಮತದಾರರನ್ನೇ ಖಾಲಿ ಮಾಡಿಸುವ ಹುನ್ನಾರ ನಡೆಸಿದೆ ಎಂದು ಕಿಡಿಕಾರಿದೆ.

ಚಿಲುಮೆ ಸಂಸ್ಥೆಗೆ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಂದೀಶ್ ರೆಡ್ಡಿ ಕಡೆಯಿಂದ ಹಣ ಸಂದಾಯವಾಗಿದೆ. ಹಾಗೂ ಸಂಸ್ಥೆಯ ಮುಖ್ಯಸ್ಥನೊಂದಿಗೆ ಅಶ್ವಥ್ ನಾರಾಯಣ ಅವರ ಸಂಪರ್ಕವಿದೆ. ಬಿಜೆಪಿಯ ನಾಯಕರೊಂದಿಗೆ ಚಿಲುಮೆ ಸಂಸ್ಥೆಗೆ ನೇರ ಸಂಪರ್ಕವಿರುವುದು ಜಗಜ್ಜಾಹೀರು. ಹೀಗಿರುವಾಗ ಅದೇ ಸಂಸ್ಥೆಯ “ಉಚಿತ ಸೇವೆ”ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.

ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ.  ಸಿಎಂ ಬೊಮ್ಮಾಯಿ ಅವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

Key words: protect – King Pins –arrest-  workers -Chilume Institute-Congress

website developers in mysore