ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ….

ಹುಮ್ನಾಬಾದ್,ಏಪ್ರಿಲ್.8,2021(www.justkannada.in):  ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ  ಬಸವರಾಜ್ ಬೊಮ್ಮಾಯಿ ತಿಳಿಸಿದರು.Illegally,Sand,carrying,Truck,Seized,arrest,driver

ಹುಮ್ನಾಬಾದ್ ನಲ್ಲಿ ಇಂದು   ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು.‌ ಅದು ನಮ್ಮ‌ಕೆಲಸ. ಅದನ್ನು ನಾವು ಮಾಡುತ್ತೇವೆ. ಈ ಸಂಬಂಧ ರಾಜ್ಯದಲ್ಲಿರುವ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಲಾಗಿದೆ ಎಂದು ಹೇಳಿದರು.

ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಕಣ್ಣಿಗೆ ಕಾಣುತ್ತಿದೆ. ಜನ ಎಷ್ಟು ಪರಿತಪಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಷ್ಕರದಿಂದ ಸಾರಿಗೆ ಸಂಸ್ಥೆಗೆ ನಷ್ಟವಾಗುತ್ತಿದೆ. ಸಾರಿಗೆ ಸಂಸ್ಥೆಗಳನ್ನು ಗಟ್ಟಿಗೊಳಿಸಿದೆ ಶಾಶ್ವತವಾಗಿ ನೌಕರರ ಹಿತ ಕಾಯುವುದು ಎಷ್ಟು ಕಷ್ಟ ಎಂಬುದು ಎಲ್ಲರಿಗೂ ಅರಿವಿದೆ.  ಸಾರಿಗೆ ಸಂಸ್ಥೆಯು ಉಳಿಯಬೇಕು. ನೌಕರರಿಗೂ ಒಳ್ಳೆಯ ಸಂಬಳ ಸಿಗಬೇಕು.  ಅದು ದುಡಿಮೆಯಿಂದ ಮಾತ್ರ ಸಾಧ್ಯ. ದುಡಿಮೆ ಇಲ್ಲದೆ ಅದು ಅಸಾಧ್ಯ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. Protection –transport-worker- attending –duty-Home Minister -Basavaraja Bommai.

ಮುಷ್ಕರನಿರತ ಸಾರಿಗೆ ನೌಕರರಿಗೆ ಮಾನವೀಯತೆಯಿಂದ ಕಳಕಳಿಯ ಮನವಿ ಮಾಡುತ್ತೇನೆ.  ಕೆಲಸಕ್ಕೆ ಹಾಜರಾಗಿ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

Key words: Protection –transport-worker- attending –duty-Home Minister -Basavaraja Bommai.