ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

Promotion

ಮೈಸೂರು,ಜನವರಿ,24,2021(www.justkannada.in) ; ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk

ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಕಾರರು, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಶ್ರೀರಾಮ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಕಾಣದ ಕೈಗಳ ಕೈವಾಡವಿದೆ. ಉನ್ನತ ಮಟ್ಟದ ತನಿಖೆ ನಡೆಸಿ ಬಂಧಿಸುವಂತೆ ಆಗ್ರಹಿಸಿದರು.Protest-ABVP-denouncing-FDA-question-paper- leakಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಚಿರಂತ್, ಸಂಚಾಲಕರಾದ ಗೌತಮ್, ಮಲ್ಲಪ್ಪ ಸೇರಿದಂತೆ ಎಬಿವಿಪಿ ಪದಾಧಿಕಾರಿಗಳು ಹಾಜರಿದ್ದರು.

key words : Protest-ABVP-denouncing-FDA-question-paper- leak