ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ‘ಕೈ’ ಸಮರ: ಎತ್ತಿನಗಾಡಿ, ಸೈಕಲ್ ಬಳಿಕ ಇದೀಗ ಕಾಂಗ್ರೆಸ್ ನಿಂದ  ಟಾಂಗಾ ಜಾಥಾ.

Promotion

ಬೆಂಗಳೂರು,ಸೆಪ್ಟಂಬರ್,24,2021(www.justkannada.in):  ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಸಮರ ಮುಂದುವರೆದಿದ್ದು ಇಂದು ಟಾಂಗಾ ಜಾಥಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರು ಇತ್ತೀಚೆಗೆ ಎತ್ತಿನಗಾಡಿ, ಸೈಕಲ್ ಜಾಥಾ ನಡೆಸಿದ್ದರು. ಇದೀಗ ಟಾಂಗಾ ಜಾಥಾ ಮಾಡುವ ಮೂಲಕ ಮೂರನೇ ಬಾರಿಗೆ  ಕಾಂಗ್ರೆಸ್ ನಾಯಕರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಟಾಂಗಾ ಏರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾದ್ಯಕ್ಷರಾದ ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ ಸೇರಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಜಾಥಾದಲ್ಲಿ ಭಾಗಿಯಾಗಿದ್ದಾರೆ.

Key words: Protest –against-BJP  Government-congress-Tonga Jatha.