ಒಳಮೀಸಲಾತಿ ವಿರೋಧಿಸಿ ಮುಂದುವರೆದ ಧರಣಿ: ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ.

ಬಾಗಲಕೋಟೆ,ಮಾರ್ಚ್,28,2023(www.justkannada.in): ಒಳಮೀಸಲಾತಿ ವಿರೋಧಿಸಿ ಶಿಕಾರಿಪುರ ಬಳಿಕ ಇದೀಗ ಇಂದು ಬಾಗಲಕೋಟೆಯಲ್ಲೂ ಪ್ರತಿಭಟನೆ ನಡೆದಿದೆ.

ಒಳಮೀಸಲಾತಿ ವಿರುದ್ದ ಬಂಜಾರ ಸಮುದಾಯ ಸಿಡಿದೆದ್ದಿದ್ದು,  ಬಾಗಲಕೋಟೆಯ ಅಮೀನಗಢ ಹುನಗುಂದ  ತಾಂಡಗಳಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

ಹಾಗೆಯೇ ಬಾಗಲಕೋಟೆ ತಾಲೂಕಿನ ಮುಚಖಂಡಿ ತಾಂಡಾದಲ್ಲಿ ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಕಟ್ಟಿದ್ದ ಬಿಜೆಪಿ ಧ್ವಜ ತೆರವುಗೊಳಿಸಿ ಲಂಬಾಣಿ ಸಮುದಾಯಕ್ಕೆ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು, ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ಹೊರ ಹಾಕಿದ್ದಾರೆ. ಒಳ ಮೀಸಲಾತಿ ಜಾರಿ ಮಾಡದಂತೆ ಆಗ್ರಹಿಸಿದ್ದಾರೆ.

Key words: protest-against-internal- reservation-bagalakote