ಕಬ್ಬು ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸುವಂತೆ ಆಗ್ರಹಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

ಮೈಸೂರು,ನವೆಂಬರ್,2,2020(www.justkannada.in):  ಕಬ್ಬು ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿದವು.jk-logo-justkannada-logo

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ  ಮೈಸೂರು ಡಿಸಿ ಕಛೇರಿ ಮುಂಭಾಗ ಜಮಾಯಿಸಿದ ರೈತ ಮುಖಂಡರು, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಶಾಶ್ವತವಾಗಿ ಬಗೆಹರಿಸುವಂತೆ ಒಕ್ಕೂರಲ ಆಗ್ರಹಿಸಿ ಪ್ರತಿಣಟನೆ ನಡೆಸಿದರು.

ಸಕ್ಕರೆ ಕಾರ್ಖಾನೆಗಳು ಕಬ್ಬಿನಿಂದ ಬರುವ ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುವುದರಿಂದ ಎಫ್ಆರ್ ಪಿ ದರ ಕಡಿಮೆಯಾಗಿದೆ. ರಾಜ್ಯದಲ್ಲಿ ಎಸ್ಎಪಿ ಕಾಯ್ದೆ ಜಾರಿಗೆ ಬಂದ ಮೇಲೆ ಕಾರ್ಖಾನೆಗಳು ಮೂರು ವರ್ಷಗಳಿಂದ ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸಿ ರೈತರಿಗೆ ಮೋಸ ಮಾಡುತ್ತಿವೆಯೆಂದು ಪ್ರತಿಭಟನಾನಿರತ ರೈತರು ಕಿಡಿಕಾರಿದರು.protest-farmer-kurubur-shanthakumar-scientific-price-fix-sugarcane-mysore

ಕಳೆದ ತಿಂಗಳು ನಡೆದ ಕಬ್ಬು ಖರೀದಿ ಮಂಡಳಿ ಸಭೆಯಲ್ಲಿ ಸಕ್ಕರೆ ಸಚಿವ ಶಿವರಾಮ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. 15 ದಿನಗಳು ಕಳೆದರೂ ಸಮಸ್ಯೆ ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ರೈತರ ಎಚ್ಚರಿಕೆ  ನೀಡಿದರು.

Key words:  protest –farmer- Kurubur Shanthakumar – scientific price- fix –sugarcane-mysore