ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ಕಪ್ಪುಪಟ್ಟ ಧರಸಿ ಪ್ರತಿಭಟನೆ: ಬೆಂಗಳೂರಿನ ನಿಮ್ಹಾನ್ಸ್ ವೈದ್ಯರ ವಿರುದ್ದ ರೋಗಿಗಳ ಆಕ್ರೋಶ…

ಬೆಳಗಾವಿ/ಬೆಂಗಳೂರು.ಜೂ,17(www.justkannada.in):  ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವೈದ್ಯರು ಹಾಗೂ ವಿದ್ಯಾರ್ಥಿಗಳು ಬೀದಿಗಿಳಿದಿದ್ದು, ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಜಮಾಯಿಸಿದ ವೈದ್ಯರು ಹಾಗೂ ವೈದ್ಯಕೀಯ  ವಿದ್ಯಾರ್ಥಿಗಳು ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಿದ್ದಾರೆ.  ಇನ್ನು ವೈದ್ಯರ ಮುಷ್ಕರಕ್ಕೆ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಬೆಂಬಲ ಸೂಚಿಸಿದ್ದು ಆಸ್ಪತ್ರೆ ಒಪಿಡಿ ಸೇವೆ ಬಂದ್ ಹಿನ್ನೆಲೆ ರೋಗಿಗಳು ಪರದಾಡುತ್ತಿದ್ದಾರೆ.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಒಪಿಡಿ ಸೇವೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆ ಆಸ್ಪತ್ರೆಗೆ ಬಂದಿದ್ದ ರೋಗಿಗಳು ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಾವು ಸಹ ವೈದ್ಯರ ಮೇಲಿನ ಹಲ್ಲೆ ಖಂಡಿಸುತ್ತೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಲಭ್ಯವಿರಲಿದೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಸರ್ಕಾರಿ ಆಸ್ಪತ್ರೆಯಾದ ನಿಮ್ಹಾನ್ಸ್ ನಲ್ಲಿ ಒಪಿಡಿ ಸೇವೆಯನ್ನ ದಿಢೀರ್ ಬಂದ್ ಮಾಡಲಾಗಿದೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರ ಸುತ್ತೋಲೆ ಹೊರಡಿಸಿದ ಎಂದು ರೋಗಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಚಿಕಿತ್ಸೆಗಾಗಿ ಬೆಳಿಗ್ಗೆಯೇ ಬಂದು ಸುಮಾರು 2ರಿಂದ ಮೂರುಗಂಟೆಗಳ ಕಾಲ ಕಾಯುತ್ತಿದ್ದರೂ ಆಸ್ಪತ್ರೆ ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸರಿಯಾಗಿ ರೆಸ್ಪಾನ್ಸ್ ಮಾಡುತ್ತಿಲ್ಲ ಎಂದು ರೋಗಿಯೊಬ್ಬರು ಕಿಡಿಕಾರಿದ್ದಾರೆ.

Key words: Protest in Belgavi condemning assault on doctor: Patients’ outrage against Nimhans doctors in Bangalore.

#Protest  #belgavi #condemning #assault #doctor