ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ: ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹ.

ಮೈಸೂರು,ಜೂನ್,2,2022(www.justkannada.in):  ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ  ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಮೈಸೂರು ವಿವಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮೈಸೂರು ವಿವಿ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ  ಕುವೆಂಪುಗೆ ಅಪಮಾನ  ಮಾಡಿದ್ದಾರೆ. ಕೂಡಲೇ ರೋಹಿತ್ ಚಕ್ರತೀರ್ಥ ಬಂಧಿಸುವಂತೆ ಒತ್ತಾಯಿಸಿದರು. ಅಲ್ಲದೆ ಬಿಜೆಪಿ ಸರ್ಕಾರ ಇತಿಹಾಸ ತಿರುಚುತ್ತಿದೆ. ಮಹಾನ್ ವ್ಯಕ್ತಿಗಳ ಬಗ್ಗೆ ಅವಹೇಳನ ಮಾಡಿ ಪುಸ್ತಕ ಮುದ್ರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಮೈಸೂರು ನಗರ  ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಮೈಸೂರು ನಗರ  ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿ ರೋಹಿತ್ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ದಿಕ್ಕು ತಪ್ಪಿಸುತ್ತಿದೆ. ಹಿಂದೆ ಇದ್ದ ಪಠ್ಯವನ್ನೇ ಮಕ್ಕಳಿಗೆ ಬೋಧಿಸಿ. ಕೂಡಲೇ ಪಠ್ಯ ಪುಸ್ತಕ ಸಮಿತಿಯನ್ನ ತೆಗೆದು ಹಾಕಬೇಕು. ಹಿರಿಯ ಸಾಹಿತಿಗಳ ಮಾತು ಕೇಳದೆ , RSS ನವರು ಹೇಳಿದಂತೆ ಕೇಳುತ್ತಿದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Key words: Protest –Mysore-against-textbook -revision