ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ: ಯುಪಿ ಸರ್ಕಾರ ವಜಾ ಮಾಡುವಂತೆ ಆಗ್ರಹ…

Promotion

ಮೈಸೂರು,ಆ,24,2020(www.justkannda.in):   ದಲಿತರ ಮೇಲಿನ ದೌರ್ಜನ್ಯ ಮತ್ತು  ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಉತ್ತರ ಪ್ರದೇಶದ ಲಕ್ಷ್ಮೀಪುರದಲ್ಲಿ ನೇಪಾಳ ಗಡಿ ಗ್ರಾಮದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಖಂಡಿಸಿ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.Protest -Mysore –condemns- rape - minor girl

ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳು ಕಳೆದಿದೆ.  ಆದರೂ ಇನ್ನು ಇಂತಹ ಹೀನ ಕೃತ್ಯಗಳು ನಡೆಯುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ ಪೋಕ್ಸೋ ಜಾರಿಯಲ್ಲಿದ್ರು ಕಾನೂನನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಇದು ಯುಪಿ ಸರ್ಕಾರದ ಬೇಜಾವಾಬ್ದಾರಿ ಈ ಕೂಡಲೇ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ರಾಜೀನಾಮೆ ನೀಡಬೇಕು. ಮಹಿಳೆಯರನ್ನು ರಕ್ಷಣೆ ಮಾಡದ ಯುಪಿ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Key words: Protest -Mysore –condemns- rape – minor girl