ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.

Promotion

ಮೈಸೂರು,ಡಿಸೆಂಬರ್,7,2021(www.justkannada.in):  ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ  ಮೈಸೂರಿನಲ್ಲಿ ಇಂದು  ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪ್ರವೇಶ ಶುಲ್ಕ ಹೆಚ್ಚಳ ವಿರೋಧಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳದಿಂದ ಖಾಸಗಿ ಕಾಲೇಜಿಗೆ ಸರ್ಕಾರಿ ಕಾಲೇಜು ಯಾವುದೆ ವ್ಯಾತ್ಯಾಸ ಇಲ್ಲದಾಗಿದೆ.ಮೆರಿಟ್ ಪಡೆದು ಬರುವ ಬಡ ವಿಧ್ಯಾರ್ಥಿಗಳು ಶುಲ್ಕ ಹೆಚ್ಚಳದಿಂದ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸರ್ಕಾರ ಸರ್ಕಾರಿ  ಇಂಜಿನಿಯರಿಂಗ್ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳ ವಾಪಾಸ್ ಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Key words: Protest – Mysore -denouncing -engineering –entrance- fee -hike