ನ್ಯಾಯಕ್ಕಾಗಿ ನಡುರಸ್ತೆಯಲ್ಲಿ ಆರಕ್ಷಕನಿಂದ ಪ್ರತಿಭಟನೆ…

ಹಾಸನ, ಆ,9,2018(www.justkannada.in) : ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಪೊಲೀಸ್ ಪೇದೆಯೊಬ್ಬರು ನ್ಯಾಯ ಬೇಕೆಂದು ನಡುರಸ್ತೆಯಲ್ಲಿ ಪ್ರತಿಭಟನೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.jk-logo-justkannada-logo

ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ದಯಾನಂದ್ ಪ್ರತಿಭಟನೆಗೆ ಕುಳಿತವರು. ರಾಷ್ಟ್ರೀಯ ಹೆದ್ದಾರಿ 75ರ ಅಪೋಲೋ ಮೆಡಿಕಲ್ ನ ಮುಂಭಾಗ ತಮ್ಮ ಕಾರ್ ನಿಲ್ಲಿಸಿ ಔಷಧಿ ತರಲು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ತಹಶೀಲ್ದಾರ್ ಮಂಜುನಾಥ್ ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲುಗಡೆ ಮಾಡಿರುವುದನ್ನು ಗಮನಿಸಿದ್ದಾರೆ.

ಈ ವೇಳೆ ತಮ್ಮ ಕಾರು ಚಾಲಕನಿಗೆ ವಾಹನದ ಗಾಳಿ ಬಿಡಲು ಹೇಳಿದ್ದಾರೆ. ತಹಶೀಲ್ದಾರ್ ವಾಹನದ ಚಾಲಕ ಕಾರಿನ ನಾಲ್ಕು ಚಕ್ರದ ಗಾಳಿ ಬಿಟ್ಟಿದ್ದು, ಈ ವೇಳೆ ಮೆಡಿಕಲ್ ಶಾಪ್ ನಿಂದ ಕಾನ್ಸ್ ಟೇಬಲ್ ಹೊರ ಬಂದು ಕಾರ್ ಅನ್ನು ಗಮನಿಸಿ ತಹಶೀಲ್ದಾರ್ ಮಂಜುನಾಥ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ನಂತರ ಸ್ಥಳದಿಂದ ತಹಶೀಲ್ದಾರ್ ಬೇರೆಡೆಗೆ ತೆರಳಿದ್ದಾರೆ.

ದಂಡ ಹಾಕಲಿ ಅಥವಾ ನೋಟಿಸ್ ನೀಡಲಿ :

ಈ ವೇಳೆ ಕಾನ್ಸಟೇಬಲ್  ದಯಾನಂದ್ ಗಾಂಧೀಜಿಯವರ ಫೋಟೋ ಹಿಡಿದುಕೊಂಡು ಕಾರಿನ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಕೇವಲ 2 ನಿಮಿಷದಲ್ಲಿ ಮೆಡಿಕಲ್ ಶಾಪ್ ನಿಂದ ಹೊರ ಬರುವಷ್ಟರಲ್ಲಿ ಕಾರಿನ ನಾಲ್ಕು ಚಕ್ರದ ಗಾಳಿಯನ್ನು ತೆಗೆದಿದ್ದು, ಸರಿಯಲ್ಲ. ತಹಶೀಲ್ದಾರ್ ಬೇಕಿದಲ್ಲಿ ದಂಡ ಹಾಕಲಿ ಅಥವಾ ನೋಟಿಸ್ ನೀಡಲಿ ನನಗೆ ನ್ಯಾಯಬೇಕು ಎಂದು ಆಗ್ರಹಿಸಿ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.protest-police-justice-hassan

ಪೇದೆ ಮನವೊಲಿಸಲು ಪೊಲೀಸರ ಪರದಾಟ : ಇದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು. ರಸ್ತೆಯಲ್ಲಿ ಹೋಗುವವರು ಪೇದೆಯ ಈ ವರಸೆ ಕಂಡು ಏನೆಂದು ಅರ್ಥವಾಗದೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಕೆಲವರಿಗೆ ಪೇದೆಯ ಈ ವರಸೆ ಮೋಜು ತಂದರೆ ಪೊಲೀಸರು ಈತನ ಮನವೊಲಿಸಲು ಪರದಾಡಬೇಕಾಯಿತು.

ಅಂತಿಮವಾಗಿ ನಗರ ಠಾಣೆ ಪಿಎಸ್ ಐ ರಾಘವೇಂದ್ರ ಹಾಗೂ ಗ್ರಾಮಾಂತರ ಠಾಣೆಯ ಪಿಎಸ್ ಐ ಚಂದ್ರಶೇಖರ್ ಬಂದು ಇತರ ಪೊಲೀಸರ ಸಹಾಯದಿಂದ ಪೇದೆಯನ್ನು ಎತ್ತಿಕೊಂಡು ಹಾಗೂ ಕಾರನ್ನು ಪಿಕಪ್ ಮೂಲಕ ನಗರ ಠಾಣೆಗೆ ತೆಗೆದುಕೊಂಡು ಹೋಗಲಾಯಿತು.

key words: Protest – police- justice-hassan