ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ:  ಪೊಲೀಸ್ ಬೈಕ್ ಗೆ ಬೆಂಕಿ, ಬಸ್ ಮೇಲೆ ಕಲ್ಲು ತೂರಾಟ..

ನವದೆಹಲಿ,ಡಿ,17,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನವದೆಹಲಿಯಲ್ಲಿ  ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಸ್ಕೂಲ್ ಬಸ್ ಮತ್ತು ಸರ್ಕಾರಿ ಬಸ್ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನವದೆಹಲಿ, ಉತ್ತರ ಪ್ರದೇಶ , ಪಶ್ಚಿಮ ಬಂಗಾಳದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ನವದೆಹಲಿಯಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು ಪ್ರತಿಭಟನಾಕಾರರು  ಪೊಲೀಸರ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ ಡಿಟಿಸಿಯ ಕ್ಲಸ್ಟರ್ ಬಸ್ , ಸ್ಕೂಲ್ ಬಸ್ ಮೇಲೆ ಕಲ್ಲು ತೂರಾಟವಾಗಿದೆ. ಇನ್ನು ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ ಮಾಡಿದ್ದಾರೆ.

ಹಾಗೆಯೇ ನವದೆಹಲಿಯಲ್ಲಿ ಮುಂಜಾಗ್ರತಾ ಕ್ರಮವಾಗಿ 7 ಮೆಟ್ರೋ ಸ್ಟೇಷನ್  ನವದೆಹಲಿಯ ಜಫರಾಬಾದ್ ನಲ್ಲಿ ಪ್ರತಿಭಟನಾಕಾರರ ಮೇಲೆ ಡ್ರೋಣ್ ಮೂಲಕ ಪೊಲೀಸರು ಕಣ್ಣಿಟ್ಟಿದ್ದಾರೆ. ಅಲ್ಲದೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

Key words: Protest-violent – Delhi – opposition – Citizenship Amendment Act.