ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

ಮೈಸೂರು,ನವೆಂಬರ್,06,2020(www.justkannada.in) : ರಿಪಬ್ಲಿಕ್ ಸುದ್ದಿ ದೃಶ್ಯ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-logo

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾವಣೆಗೊಂಡ ಎಬಿವಿಪಿ ಸದಸ್ಯರು ಅರ್ನಬ್ ಗೋಸ್ವಾಮಿ ಅವರನ್ನು ಬಿಡುಗಡೆ ಮಾಡುವಂತೆ ವಿವಿಧ ಘೋಷಣೆಗಳನ್ನು ಕೂಗಿ ಒತ್ತಾಯಿಸಿದರು.

ಎಬಿವಿಪಿಯ ರಾಜ್ಯ ಸಹಕಾರ್ಯದರ್ಶಿ ಶ್ರೀರಾಮ ಮಾತನಾಡಿ, ಮೂಲಭೂತ ಸ್ವಾತಂತ್ರ್ಯದ ಮೇಲೆ ತುರ್ತು ಪರಿಸ್ಥಿತಿಯ ಹೇರಿಕೆಯಾಗಿದೆ. ಅರ್ನಬ್ ಗೋಸ್ವಾಮಿ ಅವರನ್ನು ಅವರ ನಿವಾಸದಿಂದ ಬುಧವಾರ ಬೆಳಿಗ್ಗೆ ಬಂದಿಸಿರುವುದು ತುರ್ತು ಪರಿಸ್ಥಿತಿಯ ದಿನಗಳಲ್ಲಿ ಮೌಲಿಕ ಸ್ವಾತಂತ್ರ್ಯದ ಮೇಲೆ ದಾಳಿ ಮಾಡಿದ ಹಾಗಿದೆ ಎಂದು ದೂರಿದರು.

ಕಾನೂನು ಬಾಹಿರವಾಗಿ ಬಂಧಿಸಿರುವುದು ಇಡೀ ದೇಶದ ಪತ್ರಿಕಾ ಸ್ವಾತಂತ್ರ್ಯವನ್ನು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸುವ ಷಡ್ಯಂತ್ರವಾಗಿದೆ. ಅರ್ನಬ್ ಗೋಸ್ವಾಮಿ ಪಾಲಘರ್ ನಲ್ಲಿ ಸಾಧುಗಳ ಹತ್ಯೆ ನಡೆದಿರುವ ಬಗ್ಗೆ ಮತ್ತು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನೇಕ ಕಾನೂನು ಬಾಹಿರ ಕೃತ್ಯಗಳ ಕುರಿತಾಗಿ ರಾಜ್ಯ ಸರಕಾರಕ್ಕೆ ಕನ್ನಡಿ ತೋರಿಸಿದ್ದರು. ಎಲ್ಲ ಘಟನೆಗಳನ್ನು ವರದಿ ಮಾಡಿರುವುದು ಪ್ರಜಾಪ್ರಭುತ್ವದಲ್ಲಿ ಸರಕಾರಕ್ಕೆ ಅಶೋಭನೀಯವಾಗಿದೆ ಎಂದು ಬೇಸರವ್ಯಕ್ತಪಡಿಸಿದರು.

ಮಹಾರಾಷ್ಟ್ರ ಪೊಲೀಸರಿಂದ ತನಿಖೆಯ ನಂತರ 2018ರಲ್ಲಿ ನಡೆದ ಆತ್ಮಹತ್ಯೆಯ ಕೇಸ್ ಅಂತ್ಯಕಂಡಿತ್ತು. ಆದರೆ, ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಕೇಸನ್ನು ಮತ್ತೆ ಓಪನ್ ಮಾಡಿ ಮಹಾರಾಷ್ಟ್ರ ಸರಕಾರವು ತನ್ನ ಪ್ರಜಾ ಪ್ರಭುತ್ವ ವಿರೋಧಿ ಮುಖವಾಡವನ್ನು ಬಯಲು ಮಾಡಿಕೊಂಡಿದೆ ಎಂದು ಕಿಡಿಕಾರಿದರು.

ಅರ್ನಬ್ ಗೋಸ್ವಾಮಿಯವರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಮದು ಮತ್ತು ಮಹಾರಾಷ್ಟ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳನ್ನು ನಿಲ್ಲಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಚಿರಂತ್, ನಗರ ಸಹಕಾರ್ಯದರ್ಶಿ ಪ್ರಜ್ಞಾ, ರಚನಾ, ನಾಗಶ್ರೀ, ಸುಹಾಸ್ ನಂದಿಸಿ, ನಾಗಾಕಿರಣ್, ಕಿರಣ್, ಚಂದ್ರು, ಮಲ್ಲಪ್ಪ ಭಾಗವಹಿಸಿದ್ದರು.Protest,ABVP,condemning,Arnab Goswami's,arrest

key words : Protest-ABVP-condemning-Arnab Goswami’s-arrest