ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಮೈಸೂರು,ಸೆಪ್ಟೆಂಬರ್,22,2020(www.justkannada.in) : ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-logoಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಬೇಡಿಕೆ ಈಡೇರಿಸುವಂತೆ ಆಕ್ರೋಶವ್ಯಕ್ತಪಡಿಸಿದರು.

ಸಮಿತಿಯ ಉಪಾಧ್ಯಕ್ಷ ಬಾಬುರಾಜು ಮಾತನಾಡಿ, ಲಾಕ್ ಡೌನ್ ಅವಧಿಯ ಗೌರವ ಧನ ಬಿಡುಗಡೆ ಮಾಡಬೇಕು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ಮುಂದುವರಿಸಬೇಕು, ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿದರು.

Protest-meet-demand-guest-lecturers

ರಾಜ್ಯಾದ್ಯಂತ ಸಂಭ್ರಮದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತಾದರೂ ಈ ಬಾರಿ ಅತಿಥಿ ಉಪನ್ಯಾಸಕರ ಪಾಲಿಗೆ ಕರಾಳದಿನವಾಗಿದೆ. ಕಳೆದ 11ವಾರಗಳಿಂದ ನಮ್ಮ ಬೇಡಿಕೆಗಳಿಗೆ ಹಾಗೂ ಗೌರವಧನಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರೂ ಉನ್ನತ ಶಿಕ್ಷಣ ಸಚಿವರಾಗಲಿ, ಕಾಲೇಜು ಶಿಕ್ಷಣ ಇಲಾಖೆಯಾಗಲಿ , ಮುಖ್ಯಮಂತ್ರಿಗಳಾಗಲಿ ಮಧ್ಯಸ್ಥಿಕೆ ವಹಿಸದೆ ಎಲ್ಲರೂ ಮೌನ ತಾಳಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಸಂಘಟನಾಕಾರ್ಯದರ್ಶಿ ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.

key words : Protest-meet-demand-guest-lecturers