ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ವಿಚಾರ: ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ- ಸಿಎಂ ಬೊಮ್ಮಾಯಿ.

Promotion

ನವದೆಹಲಿ,ಜೂನ್,17,2022(www.justkannada.in):  ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜಾರಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದು ಬಿಹಾರ, ಉತ್ತರ ಪ್ರದೇಶ, ತೆಲಂಗಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ರಾಜ್ಯದಲ್ಲಿ ನಡೆಯದಂತೆ ಕ್ರಮ ಕೈಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳ ಜತೆ ಸಭೆ ಮಾಡಿದ್ದೇನೆ.  ಕಾನೂನು ಸುವ್ಯಸ್ಥೆಗೆ ಧಕ್ಕೆ ಆಗಲ್ಲ. ಅಗ್ನಿಪಥ ಯೋಜನೆ ಅತ್ಯುತ್ತಮ ಯೋಜನೆಯಾಗಿದೆ. ಈ ಯೋಜನೆ ಬಗ್ಗೆ ಕೇಂದ್ರ ಮಾಹಿತಿ ನೀಡುತ್ತದೆ ಎಂದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನ ಭೇಟಿಯಾಗಿ ಚರ್ಚಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Protests – action-  CM-Basavaraj Bommai.