ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ: ಮತೀಯ ಭಾವನೆ ಕೆರಳಿಸುವ ಹೇಳಿಕೆ ನೀಡದಂತೆ ಸಿಎಂ ಬಿಎಸ್ ವೈ ಖಡಕ್ ಸೂಚನೆ…

Promotion

ಬೆಂಗಳೂರು,ಡಿ,20,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಹೆಚ್ಚಾಗಿದ್ದು ಮಂಗಳೂರಿನಲ್ಲಿ ಹಿಂಸಾತ್ಮಕರೂಪಕ್ಕೆ ತಿರುಗಿ ಎರಡು ಬಲಿ ಪಡೆದಿದೆ. ಹೀಗಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ಎಚ್ಚರ ವಹಿಸುವಂತೆ ಸಚಿವರು ಮತ್ತು ಶಾಸಕರಿಗೆ  ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ನಿನ್ನೆ ಮಂಗಳೂರಿನಲ್ಲಿ ಪ್ರತಿಭಟನೆ ಕಾವು ಜೋರಾಗಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ.  ಈ ಸಂಬಂಧ ಮತೀಯ ಭಾವನೆ ಕೆರಳಿಸುವಂತಹ ಹೇಳಿಕೆಗಳನ್ನ ನೀಡಿದರೇ ಮತ್ತಷ್ಟು ಅಕ್ರೋಶ ಹೆಚ್ಚಾಗಲಿದೆ.

ಅಲ್ಲದೆ ಕೆಲ ಶಾಸಕರು ಸಚಿವರು ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆ, ಯಾರೂ ಮತೀಯ ಭಾವನೆ ಕೆರಳಿಸುವ ಹೇಳಿಕೆ ನೀಡಬಾರದು. ಬಾಯಿಗೆ ಬಂದಂತೆ ಮಾತನಾಡಬಾರದು. ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ಎಚ್ಚರಿಕೆ ವಹಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಚಿವರು ಶಾಸಕರಿಗೆ ಸೂಚನೆ ನೀಡಿದ್ದಾರೆ.

Key words: Protests -against -Citizenship Amendment Act- CM BS Yeddyurappa- instructed – fanatical statement.