ಗೈರಾಗಿ ಪ್ರತಿಭಟನೆ ನಡೆಸಿದ್ರೂ ಸ್ಪಂದನೆ ಸಿಗದ ಹಿನ್ನೆಲೆ: ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಆಶಾಕಾರ್ಯಕರ್ತೆಯರು ನಿರ್ಧಾರ…

ಬೆಂಗಳೂರು,ಜು,28,2020(www.justkannada.in): ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರೂ ಸ್ಪಂದಿಸದ ಹಿನ್ನೆಲೆ ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಧರಣಿ ನಿರತ ಆಶಾಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.jk-logo-justkannada-logo

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ರೂ. 12000 ನೀಡಬೇಕು. ಜೊತೆಗೆ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು  ಒದಗಿಸುವುದು ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಶಾಕಾರ್ಯಕರ್ತೆಯರು ಕಳೆದ 19 ದಿನಗಳಿಂದ ಕರ್ತವ್ಯಕ್ಕೆ ಗೈರಾಗಿ ಧರಣಿ ನಡೆಸುತ್ತಿದ್ದಾರೆ.protests-asha-worker-cm-hosue-tomorrow

ಆಶಾಕಾರ್ಯಕರ್ತೆಯರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆ ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Key words: protests –asha worker-CM-hosue- tomorrow.