ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರಿಂದ ಪ್ರತಿಭಟನೆ

kannada t-shirts

ಮೈಸೂರು, ಸೆಪ್ಟೆಂಬರ್,10,2020(www.justkannada.in) :  ವಿಕಲ ಚೇತನರ ಕಲ್ಯಾಣ ಇಲಾಖೆಯ ಸಹಾಯಕ್ಕಾಗಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೊದ್ದೇಶ ಪುನರ್ ವಸತಿ ಕಾರ್ಯಕರ್ತರನ್ನು(ಎಂಆರ್ ಡಬ್ಲ್ಯೂ)ತಾಲೂಕು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಗ್ರಾಮೀಣ ಪುನರ್ ವಸತಿ ಹಾಗೂ ನಗರ ಪುನರ್ ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟ ಮೈಸೂರು ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

jk-logo-justkannada-logo

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಎಸ್.ಮಹದೇವಯ್ಯ ಮಾತನಾಡಿ, ತಾಲೂಕು ನೋಡಲ್ ಅಧಿಕಾರಿಗಳಾಗಿ ಆಗಸ್ಟ್ 26ರಂದು ಆಯ್ಕೆ ಮಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ರದ್ದು ಮಾಡುವಂತೆ ಒತ್ತಾಯಿಸಿದರು.

Protests-disabled-persons-demanding-various-demands

ವಿಶೇಷ ಚೇತನರ ಕಾರ್ಯ ಮಾಡಲು ವಿಕಲಚೇತನರ ಗ್ರಾಮೀಣ ಪುನರ್ ವಸತಿ ಯೋಜನೆಯನ್ನು ಪ್ರಾರಂಭಿಸಿ ಅಂದಿನಿಂದ ಇಂದಿನವರೆಗೂ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುತ್ತಿರುವ ವಿಕಲಚೇತನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಪುನರ್ ವಸತಿಗಾಗಿ 13ವರ್ಷಗಳಿಂದಲೂ ಕಡಿಮೆ ಗೌರವಧನ ಪಡೆದು ನಾವು ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧೀನ ಕಾರ್ಯದರ್ಶಿ-2 ಜಿ.ಹೆಚ್.ಸರೋಜಮ್ಮನವರು ವಿಕಲಚೇತನರು, ಹದಿಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ನಮ್ಮನ್ನು ಯಾವುದೇ ರೀತಿ ಪರಿಗಣನೆ ಮಾಡದೆ ಎಸಿಡಿಪಿಒ ಅವರನ್ನು ತಾಲೂಕು ನೋಡಲ್ ಅಧಿಕಾರಿಗಳ ಹುದ್ದೆಗೆ ನೇಮಕ ಮಾಡಿರುವುದು ಮಲತಾಯಿ ಧೋರಣೆಯಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ದೇವರಾಜು, ಆರ್.ಎಂ ಸ್ವಾಮಿ, ಲಕ್ಷ್ಮಿ, ಹೇಮಂತ್ ಕುಮಾರ್, ದಿನೇಶ್, ರಂಗಸ್ವಾಮಿ ಇನ್ನೀತರರು ಭಾಗವಹಿಸಿದ್ದರು.

key words : Protests-disabled-persons-demanding-various-demands

website developers in mysore