ಶ್ರೀರಾಂಪುರದಲ್ಲಿ ಸ್ಮಶಾನ ಜಾಗ ಒತ್ತುವರಿ ಖಂಡಿಸಿ ಪ್ರತಿಭಟನೆ

kannada t-shirts

ಮೈಸೂರು,ಅಕ್ಟೊಂಬರ್,01,2020(www.justkannada.in) : ಕೆ.ಆರ್.ನಗರ ತಾಲೂಕಿನ ಶ್ರೀರಾಂಪುರದಲ್ಲಿ ದಲಿತರ ಸ್ಮಶಾನ ಜಾಗವನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಸಮತಾ ಸೈನಿಕ ದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.jk-logo-justkannada-logoಜಿಲ್ಲಾಧಿಕಾರಿಗಳ ಕಚೇರಿ ಬಳಿ ಬುಧವಾರ ಜಮಾವಣೆಗೊಂಡ ಪ್ರತಿಭಟನಕಾರರು ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಮತ್ತೆ ತಮ್ಮ ವ್ಯಾಪ್ತಿಗೆ ನೀಡುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿ.ಗಣೇಶ್ ಮಾತನಾಡಿ, ದಲಿತ ಕುಟುಂಬದ ಸದಸ್ಯರು ಮೃತಪಟ್ಟರೆ ಹಿಂದಿನಿಂದಲೂ ಸರ್ವೆ ನಂಬರ್ 28ರ ಸ್ಮಶಾನ ಜಾಗದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಈ ಸ್ಮಶಾನದ ಜಾಗ 4ಎಕರೆಯಿದ್ದು, ಇದು ಸಾರ್ವಜನಿಕ ಸ್ವತ್ತಾಗಿರುತ್ತದೆ. ಆದರೆ, ಕೆಲವು ಕಿಡಿಗೇಡಿಗಳು 1ಎಕರೆ, 13ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

Protests-Srirampura-condemning-cemetery-space

ಕೆಲವು ಭ್ರಷ್ಟ ಅಧಿಕಾರಿಗಳು ಭೂಗಳ್ಳರಿಗೆ ಒತ್ತುವರಿ ಮಾಡಿಕೊಳ್ಳಲು ಬೆಂಬಲ ನೀಡಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಸ್ಮಶಾನದ ಜಾಗವನ್ನು ಸರ್ವೇ ಮಾಡಿಸಿ ಸ್ಮಶಾನದ ಜಾಗವನ್ನು ಗುರುತಿಸಿ ಜಿಲ್ಲಾಡಳಿತ ವಶಪಡಿಸಿಕೊಳ್ಳಬೇಕು. ಸಂಬಂಧಪಟ್ಟ ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

4 ಎಕರೆ ಸ್ಮಶಾನ ಜಾಗವನ್ನು ಅಭಿವೃದ್ಧಿಪಡಿಸಿ, ತಡೆಗೋಡೆ ನಿರ್ಮಿಸಿ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಕಾಲುವೆಯು ಅಡ್ಡಬಂದಿರುವ ಕಾರಣದಿಂದ ಕಾಲುವೆಯ ಮೇಲೆ ಸೇತುವೆಯ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಸೆಂದಿಲ್ ಕುಮಾರ್, ಪ್ರವೀಣ್ ಕುಮಾರ್, ಸಂದೀಪ್, ಭೂಮಿಕಾ, ಈರಯ್ಯ ಅನೇಕರು ಭಾಗವಹಿಸಿದ್ದರು.

key words : Protests-Srirampura-condemning-cemetery-space

website developers in mysore