ಇಂದಿನಿಂದ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ- ಸಿಎಂ ಸಿದ್ಧರಾಮಯ್ಯ ಘೋಷಣೆ.

Promotion

ಬೆಂಗಳೂರು,ನವೆಂಬರ್,6,2023(www.justkannada.in): ಇಂದಿನಿಂದ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು.

ಮೂರು ವಾರದ ಹಿಂದೆ ಇಂಧನ ಇಲಾಖೆ ಜೊತೆ ಸಭೆ ನಡೆಸಿದ್ದೆ.  ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ನೀಡುವುದಾಗಿ ಹೇಳಿದ್ದರು.  ಕೆಲವರು ನಿರಂತರವಾಗಿ 5 ಗಂಟೆ ವಿದ್ಯುತ್ ನೀಡಿದ್ರೆ ಸಾಕು ಎಂದಿದ್ದರು. ರಾಯಚೂರು, ಕೊಪ್ಪಳ, ಯಾದಗಿರಿ ಜನ 7 ಗಂಟೆ ವಿದ್ಯುತ್ ನೀಡಲು ಮನವಿ ಮಾಡಿದ್ದರು. ಭತ್ತ ಕಬ್ಬು ಬೆಳಗಾರರಿಗೆ 7 ಗಂಟೆ ವಿದ್ಯುತ್ ನೀಡಲು ಹೇಳಿದ್ದೆ. ಇದೀಗ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ತಿಳಿಸಿದರು.

ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ಗಂಟೆ ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ಹೇಳಿದರು.

Key words: provide -7 hours -electricity – farmers-pump sets – CM Siddaramaiah