ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾ.

ಬೆಂಗಳೂರು,ನವೆಂಬರ್,23,2022(www.justkannada.in): 545  ಪಿಎಸ್‌ ಐ  ಹುದ್ದೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ  ಅಮೃತ್ ಪೌಲ್ ಜಾಮೀನು ಅರ್ಜಿಯನ್ನ  ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.

24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಪಿಎಸ್‌ ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಬಳಿ ಸೇಫ್ ಲಾಕರ್ ​​ನ ಕೀ ಇತ್ತು. ಕಿರಿಯ ಅಧಿಕಾರಿಗಳಿಗೆ ಕೀ ಕೊಟ್ಟು ದುರುಪಯೋಗ ಮಾಡಲಾಗಿದೆ. ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ನೀಡದಂತೆ ಎಸ್​​ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು.

ಈ ವಾದ-ಪ್ರತಿವಾದ ಆಲಿಸಿದ ನ್ಯಾ.ಕೆ.ಲಕ್ಷ್ಮಿನಾರಾಯಣ ಭಟ್, ಅಮೃತ್ ಪೌಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದರು. ಇದರಿಂದ ಅಮೃತ್ ಪೌಲ್​ಗೆ ಜೈಲೇ ಗತಿಯಾಗಿದೆ.

Key words: PSI –Recruitment- Illegal Case-Amrit Paul’s- bail application- dismissed