ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್.

Promotion

ಕಲ್ಬರ್ಗಿ, ನವೆಂಬರ್,2,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪಿಎಸ್ ಐ ನೇಮಕಾತಿಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ಬಂಧಿಸಿದ ಸಿಐಡಿ ಪೊಲೀಸರು. ಸುಪ್ರಿಯಾ ಹುಂಡೇಕರ್  ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿರುವ ಆರೋಪ ಎದುರಿಸುತ್ತಿದ್ದು, ಮಹಿಳಾ ಕೋಟಾದಲ್ಲಿ ಮೊದಲ ಸ್ಥಾನ ಪಡೆದಿದ್ದರು.  ಆರ್ ಡಿ ಪಾಟೀಲ್ ಮೂಲಕ ಬ್ಲೂಟೂತ್ ಬಳಸಿ ಪರೀಕ್ಷೆ  ಅಕ್ರಮವೆಸಗಿರುವ ಆರೋಪ ಕೇಳಿ ಬಂದಿದೆ.

ಪಿಎಸ್​ಐ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 52 ಮಂದಿಯನ್ನು ಸಿಐಡಿ ಬಂಧಿಸಿದೆ. ಪಿಎಸ್​ಐ ನೇಮಕಾತಿಗಾಗಿ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಿತ್ತು. ಪರೀಕ್ಷೆಯಲ್ಲಿ  ಅಭ್ಯರ್ಥಿಗಳಿಂದ ಲಂಚ ಪಡೆದಿರುವ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಕ್ರಮ ಎಸಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಒತ್ತಡ ಹೆಚ್ಚಾಗಿ, ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿತ್ತು.

Key words: PSI-Recruitment-Illegal Case-Another- accused -arrested.