ಕಾಂಗ್ರೆಸ್;ಗೆ ಪಿಎಸ್ಐ ಹಗರಣದ ನಂಟು: ಕೈ ನಾಯಕರಿಗೆ ಪ್ರಹ್ಲಾದ್ ಜೋಶಿ ತಿರುಗೇಟು

Promotion

ಬೆಂಗಳೂರು, ಮೇ 08, 2022 (www.justkannada.in): ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ತನಿಖಾ ಸಂಸ್ಥೆಗಳಿಂದ ತನಿಖೆ ಬೇಡ ನ್ಯಾಯಂಗ ತನಿಖೆ ಬೇಕು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಇದರಿಂದ ಆರೋಪಿಗಳನ್ನು ರಕ್ಷಣೆ ಮಾಡಲು ಮುಂದಾಗುತ್ತಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ.

“ಪ್ರಿಯಾಂಕ್ ಖರ್ಗೆ ಮನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಅವರ ಸಹೋದರ ಇರುತ್ತಿದ್ದರು. ಯಾಕೆ ಅವರು ನೋಟಿಸ್ ನೀಡಿದ್ದರೂ ಉತ್ತರ ನೀಡುತ್ತಿಲ್ಲ. ಅವರು ಶಾಸಕರೋ, ಸಾಮಾನ್ಯ ಜನರೋ?. ಆರೋಪ ಮಾಡಿದ ಮೇಲೆ ಅವರು ದಾಖಲೆ ನೀಡಬೇಕಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಅವ್ಯವಹಾರದಲ್ಲಿ ಕಾಂಗ್ರೆಸ್ ಶಾಮೀಲಾಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಆದ್ದರಿಂದ ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನಾಯಕರು ತನಿಖೆ ಬೇಡ ಎನ್ನುತ್ತಿದ್ದಾರೆ” ಎಂದು ಆರೋಪಿಸಿದರು.