ಹಿಜಾಬ್ ವಿವಾದದ ನಡುವೆ ಇಂದಿನಿಂದ ಪಿಯು ಕಾಲೇಜುಗಳು ಪುನಾರಂಭ.

Promotion

ಬೆಂಗಳೂರು,ಜೂನ್,9,2022(www.justkannada.in):  ಹಿಜಾಬ್ ವಿವಾದದ ನಡುವೆ ಇಂದಿನಿಂದ ಪಿಯು ಕಾಲೇಜುಗಳು ಆರಂಭವಾಗಿದ್ದು ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿದೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು,  ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಇಂದಿನಿಂದ ಆರಂಭವಾಗಿವೆ. ಕಳೆದ 2 ವರ್ಷ ಕೋವಿಡ್ ಕಾರಣದಿಂದ ತರಗತಿ ಸರಿಯಾಗಿ ನಡೆದಿಲ್ಲ. ಈ ವರ್ಷ ಪರಿಣಾಮಕಾರಿಯಾಗಿ ಶಿಕ್ಷಣ ನೀಡುವ ಗುರಿ ಶಿಕ್ಷಣ ಇಲಾಖೆಗಿದೆ. ಈ ಭಾರಿ ದಾಖಲೆ ಪ್ರಮಾಣದಲ್ಲಿ SSLC ವಿದ್ಯಾರ್ಥಿಗಳು ಪಾಸ್ ಆಗಿರುವುದರಿಂದ ಪಿಯು ಕಾಲೇಜುಗಳ ದಾಖಲೆಯ ದಾಖಲಾತಿಯೂ ಆಗಿದೆ. ಈ ಹಿನ್ನೆಲೆಯಲ್ಲಿ ತರಗತಿ ಆರಂಭಕ್ಕೆ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪದವಿಪೂರ್ವ ಕಾಲೇಜುಗಳಿಗೂ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು,  ಹಿಜಾಬ್ ಧರಿಸಿ ಬಂದರೆ ತರಗತಿಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶ ಪಾಲಿಸಲು ಸರ್ಕಾರ ಸೂಚನೆ ನೀಡಿದೆ.

Key words: PU colleges- restart -today -hijab -controversy