5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ: ಸ್ಪಷ್ಟನೆ ನೀಡಿದ ಸಚಿವ ಬಿ.ಸಿ.ನಾಗೇಶ್

Promotion

ಬೆಂಗಳೂರು, ಅಕ್ಟೋಬರ್ 9, 2022 (www.justkannada.in): ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್‌ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ ಎಸ್‌ಎಲ್ ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್‌ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಅಕ್ಟೋಬರ್ 13 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.