ದೀಪಾವಳಿ ಹಬ್ಬ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.

ಬೆಂಗಳೂರು,ಅಕ್ಟೋಬರ್,30,2021(www.justkannada.in):   ಕೊರೊನಾ ನಡುವೆ ರಾಜ್ಯದಲ್ಲಿ ದೀಪಾವಳಿ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸರಳ ಹಾಗೂ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತು  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯಾದ್ಯಂತ ನವೆಂಬರ್ ಮಾಹೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಿದ್ದು, ರಾಜ್ಯದ ಜನತೆಯ ಹಿತದೃಷ್ಠಿಯಿಂದ ಮತ್ತು ಕೋವಿಡ್-19 ಸೋಂಕು ಪ್ರಸರಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ದೀಪಾವಳಿ ಹಬ್ಬದ ಆಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೀಪಾವಳಿ ಹಬ್ಬವನ್ನು ವಿಪತ್ತು ನಿರ್ವಣಾ ಅಧಿನಿಯಮ 2005ರ ಅಡಿಯಲ್ಲಿ ದೀಪಾವಳಿ ಆಚರಣೆಗೆ ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ, ಹಬ್ಬ ಆಚರಿಸುವಂತೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕಟಿಸುರುವ ಗೈಡ್ ಲೈನ್ಸ್ ಈ ಕೆಳಕಂಡಂತಿದೆ.

ಸರ್ವೋಚ್ಛನ್ಯಾಯಾಲಯದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತು ಹಚ್ಚತಕ್ಕದ್ದಲ್ಲ

ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡತಕ್ಕದ್ದು.

ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ದಿನಾಂಕ 01-11-2021ರಿಂದ 10-11-2021ರವರೆಗೆ ಮಾತ್ರ ತೆರೆದಿರತಕ್ಕದ್ದು.

ನಿಗದಿ ಪಡಿದ ಸ್ಥಳದಲ್ಲಿ ಮಾತ್ರ ಪಟಾಕಿ ಅಂಗಡಿ ತೆರೆಯುವುದು

ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸುವುದು.

ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.

ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.

‘ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸಾನಿಟೈಸರ್ ಹಾಗೂ ಥರ್ಮಲ್ ಸೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನು. ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ ತಕ್ಕಮ್ಮು, ಪಟಾಕಿ ಮಾರುವ ವ್ಯಾಪಾರಸ್ತರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು

ಹಸಿರು ಪಟಾಕಿ’ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.

‘ಹಸಿರು ಪಟಾಕಿ ಕುರಿತು ಸರ್ಕಾರದ ಆದೇಶ ಸಂಖ್ಯೆ: ಆರ್‌ಡಿ 465 ಟಿಎನ್‌ಆರ್ 2020, ದಿನಾಂಕ:12-11-2020 ರ ನೀಡಲಾದ ವಿವರಣೆಗಳನ್ನು ಅನುಸರಿಸುವುದು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆ/ಕಾರ್ಪೋರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

Key words: Published – Government -Guidelines – Diwali Celebration