ನಾಳೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಮೈಸೂರಿನಲ್ಲಿ ಸಕಲ ಸಿದ್ಧತೆ….

ಮೈಸೂರು,ಜೂ,17,2020(www.justkannada.in): ನಾಳೆ ದ್ವಿತೀಯ ಪಿಯುಸಿ ಕೊನೆಯ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಕರೊನಾ ಬಿಕ್ಕಟ್ಟಿನ ನಂತರ ನಡೆಯುತ್ತಿರುವ ಮೊದಲ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೈಸೂರಿನಲ್ಲಿ ಪರೀಕ್ಷೆ ಸಿದ್ಧತೆ ಬಗ್ಗೆ ಡಿಡಿಪಿಐ ಜಿ.ಆರ್.ಗೀತಾ ಮಾಹಿತಿ ನೀಡಿದ್ದಾರೆ.  ಮೈಸೂರು ಜಿಲ್ಲೆಯಲ್ಲಿ 31,569 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೈಸೂರಿನಲ್ಲಿ 436 ಹೊರ ಜಿಲ್ಲೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 504 ಮೈಸೂರು ಜಿಲ್ಲೆ ವಿದ್ಯಾರ್ಥಿಗಳು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9 ಅಂತಾರಾಜ್ಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.PUC –English- exam- tomorrow- Mysore

ಮೈಸೂರು ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಿವೆ. ಗ್ರಾಮಾಂತರ ಪ್ರದೇಶದ ಪರೀಕ್ಷಾ ಕೇಂದ್ರಗಳು 24. 900ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಕೇಂದ್ರಗಳು 3 ಇವೆ.  10 ಪರೀಕ್ಷಾ ಕೇಂದ್ರಗಳಲ್ಲಿ 800ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಮಾರ್ಕಿಂಗ್, ಡಿಸ್‌ಇನ್ಫೆಕ್ಷನ್, ನೋಂದಣಿ ಸಂಖ್ಯೆ ಬರೆಯುವುದು ಸೇರಿದಂತೆ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಕಾಲೇಜು ಪ್ರಾಂಶುಪಾಲರಿಗೆ  ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ನೀಡುವ ಜವಾಬ್ದಾರಿ ನೀಡಲಾಗಿದೆ ಎಂದು ಡಿಡಿಪಿಐ ಜಿ.ಆರ್.ಗೀತಾ ತಿಳಿಸಿದರು.

Key words: PUC –English- exam- tomorrow- Mysore