ಕೊನೆಗೂ ಉದ್ಘಾಟನೆಯಾದ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ….

ಮಂಗಳೂರು,ಜ,31,2020(www.justkannada.in):  ಕಳೆದ 10 ವರ್ಷಗಳಿಂದ ಕಾಮಗಾರಿ ಕುಂಠಿತಗೊಂಡು ಉದ್ಘಾಟನೆ ಕಾಣದೆ ಹಲವು ಟ್ರೋಲ್ ಗಳಿಗೆ ಒಳಗಾಗಿದ್ದ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ಕೊನೆಗೂ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ.

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಪಂಪ್ ವೆಲ್ ಮೇಲ್ಸೆತುವೆಯನ್ನ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

2010ರಲ್ಲಿ ನವಯುವ ಕಂಪನಿ ಗುತ್ತಿಗೆ ಪಡೆದು ಆರಂಭಿಸಿದ್ದ 600 ಮೀಟರ್ ಉದ್ದದ ಫ್ಲೈಓವರ್ ಕಾಮಗಾರಿ 2013ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಕಾಮಗಾರಿ 10 ವರ್ಷವಾದರೂ ಪೂರ್ಣಗೊಳ್ಳದೇ ಹತ್ತಾರು ಡೆಡ್‍ಲೈನ್‍ಗಳನ್ನು ಕಂಡಿದ್ದು, ನಿಧಾನಗತಿ ಕಾಮಗಾರಿಯಿಂದ ಫ್ಲೈ ಓವರ್ ಭಾರೀ ಸುದ್ದಿಯಾಗಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಭಾರೀ ಟ್ರೋಲ್ ಗೆ ಒಳಗಾಗಿದ್ದರು.

Key words: Pump Well -Flyover –Mangalore-minister-kota shrinivas poojari