ಯೂಟ್ಯೂಬ್’ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ ಅಪ್ಪು ಕನಸಿನ ‘ಗಂಧದ ಗುಡಿ’

ಬೆಂಗಳೂರು, 06 ಡಿಸೆಂಬರ್, 2021 (www.justkannada.in): ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಗಂಧದಗುಡಿ ಟೀಸರ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ.

ಪುನೀತ್​ ರಾಜ್​ಕುಮಾರ್​ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ​ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು.

ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ.

ಚಿತ್ರದ ಟೀಸರ್ ಅನ್ನು ಎಲ್ಲ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. PRK ಆಡಿಯೋ ಯೂಟ್ಯೂಬ್​ ಚಾನೆಲ್ ​ನಲ್ಲಿ ಟೀಸರ್ ರಿಲೀಸ್ ಆಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಯಶ್ ಸೇರಿದಂತೆ ಹಲವಾರು ಮಂದಿ ಚಿತ್ರದ ಟೀಸರ್ ಮೆಚ್ಚಿದ್ದಾರೆ.