ಬೆಳ್ಳಿ ತೆರೆಯಲ್ಲಿ ಮತ್ತೆ ಅಪ್ಪು ಕಣ್ತುಂಬಿಕೊಳ್ಳುವ ಅವಕಾಶ: ಆಗಸ್ಟ್’ನಲ್ಲಿ ‘ಲಕ್ಕಿಮ್ಯಾನ್’ ರಿಲೀಸ್

ಬೆಂಗಳೂರು, ಜೂನ್ 14, 2022 (www.justkannada.in): ಪವರ್‌’ಸ್ಟಾರ್‌ ಅಭಿನಯಿಸಿದ ಕೊನೆಯ ಸಿನಿಮಾ ‘ಲಕ್ಕಿಮ್ಯಾನ್’. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ದಿನಾಂಕವನ್ನು ಚಿತ್ರತಂಡ ಇನ್ನಷ್ಟೇ ಘೋಷಿಸಬೇಕಿದೆ.

ತಮಿಳಿನ ‘ಓ ಮೈ ಕಡವುಳೆ’ ಸಿನಿಮಾ ಕಥೆಯ ಎಳೆಯನ್ನಿಟ್ಟುಕೊಂಡು, ಪ್ರಭುದೇವ ಸಹೋದರ ಎಸ್‌.ನಾಗೇಂದ್ರ ಪ್ರಸಾದ್ ಈ ಚಿತ್ರಕ್ಕೆ ಆಯಕ್ಷನ್‌ ಕಟ್‌ ಹೇಳಿದ್ದಾರೆ.

ಇಲ್ಲಿ ದೇವರ ಪಾತ್ರದಲ್ಲಿ ಪುನೀತ್‌ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆ ಬಹುಭಾಷಾ ನಟ ಪ್ರಭುದೇವ ಕೂಡ ನಟಿಸಿದ್ದು, ಹಾಡೊಂದರಲ್ಲಿ ಇವರಿಬ್ಬರೂ ಸ್ಟೆಪ್ ಹಾಕಿದ್ದಾರೆ.