ದುನಿಯಾ ವಿಜಯ್​ ನಟನೆಯ ‘ಸಲಗ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ‘ಪವರ್ ಸ್ಟಾರ್’ !

Promotion

ಬೆಂಗಳೂರು, ಅಕ್ಟೋಬರ್ 07, 2021 (www.justkannada.in): ದುನಿಯಾ ವಿಜಯ್​ ನಟನೆಯ ‘ಸಲಗ’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ‘ಪವರ್​​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಮುಖ್ಯ ಅತಿಥಿಯಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಸಲಗ’ ಚಿತ್ರ ಅ.14ರಂದು ಬಿಡುಗಡೆ ಆಗಲಿದೆ.

ಇದರ ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಪುನೀತ್​ ರಾಜ್​ಕುಮಾರ್​ ಪಾಲ್ಗೊಳ್ಳಲಿದ್ದಾರೆ. ದುನಿಯಾ ವಿಜಯ್​ ಮೊದಲ ಬಾರಿಗೆ ನಿರ್ದೇಶನ ಮಾಡಿರುವುದರಿಂದ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಶೀಘ್ರದಲ್ಲೇ ನಡೆಯಲಿರುವ ಪ್ರೀ-ರಿಲೀಸ್​ ಇವೆಂಟ್​ಗೆ ‘ಪವರ್​ ಸ್ಟಾರ್​’ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.