ಕೋವಿಡ್ ಕಿಟ್ ಖರೀದಿಯಲ್ಲಿ ಭಾರಿ ಅವ್ಯವಹಾರ: ಸಚಿವರೊಬ್ಬರ ಸಂಬಂಧಿ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಭಾಗಿ- ಎಂ. ಲಕ್ಷ್ಮಣ್ ಆರೋಪ…

Promotion

ಮೈಸೂರು,ಜು,16,2020(www.justkannada.in): ಕೋವಿಡ್  ಕೇಂದ್ರಕ್ಕೆ ಉಪಕರಣ ಖರೀದಿಸುವಲ್ಲಿ ಭಾರಿ ಅವ್ಯವಹಾರ ನಡೆದಿದ್ದು ಈ ಅವ್ಯವಹಾರದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಸ್. ಆರ್. ವಿಶ್ವನಾಥ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಸಂಬಂಧಿಯೊಬ್ಬರು ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.‌ ಲಕ್ಷ್ಮಣ್ ಆರೋಪ ಮಾಡಿದ್ದಾರೆ. jk-logo-justkannada-logo

ಮೈಸೂರಿನ‌ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.‌ ಲಕ್ಷ್ಮಣ್, ಕೋವಿಡ್ ಸಂಬಂಧದ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ಸಂಬಂಧಿ ಮಂಜುನಾಥ್ ಕೈವಾಡವಿದೆ. ಕೋವಿಡ್ ನಿಯಂತ್ರಣ ಸಂಬಂಧ ವೈದ್ಯಕೀಯ ಉಪಕರಣಗಳನ್ನು ಖರೀದಿಸಿರುವ ವಿಚಾರದಲ್ಲಿ ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಭಾಗಿಯಾಗಿದ್ದಾರೆ. ಮಂಜುನಾಥ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ಸಂಬಂಧಿಕರಾಗಿದ್ದಾರೆ. ಕೋವಿಡ್ ಆರೈಕೆ ಕೇಂದ್ರಕ್ಕೆ ಹಾಸಿಗೆ, ದಿಂಬು, ಹೊದಿಕೆಗಳನ್ನು 100 ದಿನಗಳಿಗೆ ಬಾಡಿಗೆ ಪಡೆಯುವುದರ ಮೂಲಕ 240 ಕೋಟಿ ವೆಚ್ಚ ಮಾಡಲಾಗಿದೆ. ಒಟ್ಟಾರೆ ನಾಲ್ಕು ಜನ ಗುತ್ತಿಗೆದಾರರಿಗೆ ನೀಡಲಾಗಿದ್ದು, ಬೆಂಗಳೂರಿನ ಮಂತ್ರಿಗಳ ಸಂಬಂಧಿಕರಿಗೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ಆರೋಪಿಸಿದರು.

ಕೋವಿಡ್ ಹೆಸರನ್ನು ಹೇಳಿಕೊಂಡು ಬಿಜೆಪಿ ಮುಖಂಡರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಆರೋಪ ಮಾಡುತ್ತಿದ್ದರೂ ಬಿಜೆಪಿಯಿಂದ ಹಣದ ಲೂಟಿ ನಿಂತಿಲ್ಲ. ಕೋವಿಡ್ ನಿಯಂತ್ರಣ ವಿಚಾರದಲ್ಲಿ ವಿವಿಧ ಇಲಾಖೆಗಳ ಮಂತ್ರಿಗಳ ನಡುವೆ ಹೊಂದಾಣಿಕೆ ಇಲ್ಲದಂತಾಗಿದೆ. ಕೊರೊನಾ ಸೋಂಕಿತರನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಬಿಜೆಪಿ ಮುಖಂಡರು ಕೇವಲ ಹೇಳಿಕೆಗೆ ಮತ್ತು ಪ್ರಚಾರಕ್ಕೆ ಸೀಮಿತರಾಗಿದ್ದಾರೆ ಎಂದು ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.purchase-covid-equipment-scamp-minister-relative-cm-political-secretary-kpcc-spokeperson-laxman

ತಿರುವನಂತಪುರಂನ ಎಚ್ ಎಲ್ ಎಲ್ ಕಂಪನಿಯಿಂದ 630 ವೆಂಟಿಲೇಟರ್ ಗಳನ್ನು ಖರೀದಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಸರ್ಕಾರ ಕೊಟ್ಟಿರುವ ಲೆಕ್ಕದಲ್ಲೂ ಇದು ನಮೂದಾಗಿದೆ. ಈ ಕಂಪನಿ ಕಾಂಡೋಮ್ ತಯಾರಿಕೆಯಲ್ಲಿ ಪರಿಣಿತಿ ಹೊಂದಿರುವ ಕಂಪನಿಯಾಗಿದೆ. ಕಳೆದ 40 ವರ್ಷಗಳಿಂದಲೂ ಈ ಕಂಪನಿ ಕಾಂಡೋಮ್ ತಯಾರಿಕೆಯಲ್ಲಿ ತೊಡಗಿದೆ. ಈಗ ಎರಡು ವರ್ಷದಿಂದ ವೆಂಟಿಲೇಟರ್ ಗಳನ್ನು ತಯಾರಿಸುತ್ತಿದೆ. ಇಂತಹ ಕಂಪನಿಯಿಂದ ವ್ಹೆಂಟಿಲೇಟರ್ ಖರೀದಿ ಮಾಡಲಾಗಿದೆ. ಅದರ ಬೆಲೆಯನ್ನ ನಮೂದಿಸಿಲ್ಲ ಎಂದು ಎಂ. ಲಕ್ಷ್ಮಣ್ ದೂರಿದರು.

Key words: purchase- covid equipment.-scamp-minister –relative-CM political secretary- kpcc –spokeperson-Laxman