ವಿಧಾನಪರಿಷತ್ ಚುನಾವಣೆಗೆ ಪುಟ್ಟಣ್ಣನವರೇ ಬಿಜೆಪಿ ಅಭ್ಯರ್ಥಿ- ಮೈಸೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ…

Promotion

ಮೈಸೂರು,ನ,26,2019(www.justkannada.in): ಬೆಂಗಳೂರು ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೆ ಪುಟ್ಟಣ್ಣ ಅವರೇ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಪುಟ್ಟಣ್ಣ ಮೂರು ಬಾರಿ ಜೆಡಿಎಸ್‌ ಪ್ರತಿನಿಧಿಸಿದ್ದರು. ಪುಟ್ಟಣ್ಣ ಗೆಲ್ಲುವ ಅಭ್ಯರ್ಥಿ ಹೀಗಾಗಿ ಅವರನ್ನ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡ್ತಿದ್ದೇನೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ಪುಟ್ಟಣ್ಣ ಅವರನ್ನ ಜೆಡಿಎಸ್ ನಿಂದ ಉಚ್ಛಾಟನೆ ಮಾಡಲಾಗಿದ್ದು ಶೀಘ್ರವೇ ಬಿಜೆಪಿ ಸೇರ್ಪಡೆಯಾಗುವುದಾಗಿ ಅವರು ತಿಳಿಸಿದ್ದಾರೆ.

Key words: Puttanna- BJP candidate – legislative- council-elections- Announcement – CM BS Yeddyurappa-Mysore