ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆ ಶೀಘ್ರ ತನಿಖೆ-ಸಚಿವ ಎಂ.ಬಿ ಪಾಟೀಲ್.

Promotion

ಕೊಪ್ಪಳ,ಜೂನ್,3,2023(www.justkannada.in): ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆ ಶೀಘ್ರವೇ ತನಿಖೆ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಕೊಪ್ಪಳದಲ್ಲಿ ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊವಿಡ್ ಹಗರಣ,  ಪಿಎಸ್ ಐ ಹಗರಣ.  40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ತನಿಖೆ ಮಾಡುತ್ತೇವೆ. ಅತಿಶೀಘ್ರದಲ್ಲೇ ಎಲ್ಲಾ ಕೇಸ್ ಗಳನ್ನ ತನಿಖೆ ಮಾಡುತ್ತೇವೆ ಎಂದರು.

ಗ್ಯಾರಂಟಿ ಬಗ್ಗೆ ಯಾವುದೇ ಗೊಂದಲವಿಲ್ಲ. ವಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ. ಗ್ಯಾರಂಟಿ ಬಗ್ಗೆ ಗೊಂದಲ ಸೃಷ್ಠಿಸುತ್ತಿದ್ದಾರೆ. ವರ್ಷದ ಸರಾಸರಿ ನೋಡಿ ವಿದ್ಯುತ್  ನೀಡುತ್ತೇವೆ ಎಂದು ಎಂಬಿ ಪಾಟೀಲ್ ತಿಳಿಸಿದರು.

ಇನ್ನು ಜಗದೀಶ್ ಶೆಟ್ಟರ್, ಲಕ್ಷ್ಮಣ್  ಸವದಿಗೆ ಸೂಕ್ತ ಸ್ಥಾನಮಾನ  ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Quick-investigation i-all scams – BJP Govt-Minister-MB Patil.