ಕೇರಳದಲ್ಲಿ ಅಪಘಾತಕ್ಕೀಡಾಗಿದ್ದವರನ್ನು ಆಸ್ಪತ್ರೆಗೆ ರವಾನಿಸಲು ನೆರವಾದ ರಾಹುಲ್ ಗಾಂಧಿ

Promotion

ವಯನಾಡು, ಜುಲೈ 03, 2022 (www.justkannada.in): ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆರವಾಗಿದ್ದಾರೆ.

ಅಪಘಾತಕ್ಕೆ ಸಂಭವಿಸಿದ ಮಾರ್ಗದಲ್ಲಿ ಸಾಗುತ್ತಿದ್ದರಾಹುಲ್, ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದಾರೆ.

ಲೋಕಸಭಾ ಕ್ಷೇತ್ರ ವಯನಾಡಿಗೆ ಮೂರು ದಿನಗಳ ಕಾಲ ಭೇಟಿ ನೀಡಿರುವ ರಾಹುಲ್,  ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ತಾವು ತಂಗಿದ್ದ ಹೋಟೆಲ್ ಗೆ ವಾಪಸಾಗುತ್ತಿದ್ದರು.

ಈ ವೇಳೆ ಮೋಟಾರು ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದವರಿಗೆ ಅಪಘಾತವಾಗಿತ್ತು. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾಂಗ್ರೆಸ್ ನಾಯಕ ಅಪಘಾತಕ್ಕೀಡಾದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.

ರಾಹುಲ್‌ ಗಾಂಧಿ ಆಂಬ್ಯುಲೆನ್ಸ್ನಿಂದ ಚಕ್ರದ ಸ್ಟ್ರೆಚರ್ ಅನ್ನು ತರಲು ಮತ್ತು ವ್ಯಕ್ತಿಯನ್ನು ವಾಹನಕ್ಕೆ ಸ್ಥಳಾಂತರಿಸಲು ಸಹಾಯ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.