ಬಿಜೆಪಿ ಮತ್ತು ಆರ್’ಎಸ್’ಎಸ್ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

Promotion

ಬೆಂಗಳೂರು, ಮೇ 21, 2022 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ನಲ್ಲಿ ನಡೆದ ‘ಐಡಿಯಾಸ್ ಫಾರ್ ಇಂಡಿಯಾ ಕಾನ್‌ಕ್ಲೇವ್‌’ ಕಾರ್ಯಕ್ರಮದ ಸಂವಾದದಲ್ಲಿಮಾತನಾಡಿ, ಭಾರತವನ್ನು ಕೇವಲ ಭೂಪ್ರದೇಶ ಎಂದಷ್ಟೇ ಭಾವಿಸಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ಧ್ರುವೀಕರಣದ ರಾಜಕೀಯ ಮಾಡುತ್ತಿವೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಸಮಾನತೆಯಲ್ಲಿ ನಂಬಿಕೆ ಇರಿಸಿದೆ. ಭಾರತವು ಅದರ ಜನರಿಗೆ ಸೇರಿದ ರಾಷ್ಟ್ರ ಎಂದು ನಾವು ಭಾವಿಸುತ್ತೇವೆ. ಆದರೆ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ದೇಶವನ್ನು ಕೇವಲ ಭೂಭಾಗ ಎಂದಷ್ಟೇ ಪರಿಗಣಿಸಿವೆ ಎಂದು ಹೇಳಿದ್ದಾರೆ.

‘ಜಾಗತಿಕ ಮಟ್ಟದಲ್ಲಿಯೇ ಭಾರತದಲ್ಲಿ ಪ್ರಜಾಪ್ರಭುತ್ವ ಚೆನ್ನಾಗಿದೆ. ನಾವು ಅದನ್ನು ಉಳಿಸಿಕೊಂಡುಬಂದಿದ್ದೇವೆ. ಒಂದು ವೇಳೆ ಅದು ಅಸ್ತಿತ್ವ ಕಳೆದುಕೊಳ್ಳಲು ಆರಂಭವಾದರೆ ಇಡೀ ಜಗತ್ತಿಗೇ ತೊಂದರೆಯಾಗಲಿದೆ’ ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.