ಭಾಷಾ ತಾರತಮ್ಯದ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ

ಬೆಂಗಳೂರು, ಜೂನ್ 06, 2021 (www.justkannada.in): ಭಾಷಾ ತಾರತಮ್ಯದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಎಂದು ಸರ್ಕಾರಿ ಆಸ್ಪತ್ರೆಗಳು ತಮ್ಮ್ ನರ್ಸ್ ಗಳಿಗೆ ಸೂಚಿಸಿದ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿದ ಅವರು ಮಲಯಾಳಂ ಸಹ ಭಾರತೀಯ ಭಾಷೆ, ಭಾಷಾ ತಾರತಮ್ಯವನ್ನು ನಿಲ್ಲಿಸಿ ಎಂದಿದ್ದಾರೆ.

ಅಂದಹಾಗೆ ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್​ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನೆಲ್ಲಾ ಶುಶ್ರೂಷಾ ಸಿಬ್ಬಂದಿ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸುವಂತೆ ನಿರ್ದೇಶಿಸಿತ್ತು.congress-leader-rahul-gandhi-advises-complete-lockdown-corona