ಸಂಸತ್ ಸದಸ್ಯತ್ವ ಅನರ್ಹಗೊಳಿಸುವ ಮೂಲಕ ಬಿಜೆಪಿಯಿಂದ ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕುವ ಕೆಲಸ- ಡಿಕೆ ಶಿವಕುಮಾರ್ ವಾಗ್ದಾಳಿ.

ಯಾದಗಿರಿ,ಮಾರ್ಚ್,25,2023(www.justkannada.in):  ಸಂಸತ್ ಸದಸ್ಯತ್ವ ಅನರ್ಹಗೊಳಿಸುವ ಮೂಲಕ ಬಿಜೆಪಿಯು ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಂದು ಮಾತನಾಡಿದ ಡಿ.ಕೆ ಶಿವಕುಮಾರ್,  ದೇವರು ವರ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಕೊಡುತ್ತಾನೆ. ಮಲ್ಲಿಕಾರ್ಜುನ ಖರ್ಗೆ ಅವಕಾಶ ಸಿಕ್ಕಾಗಲೆಲ್ಲ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಬಿಜೆಪಿ ರಾಹುಲ್ ಗಾಂಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್  ಜೊತೆ ಕೈಜೋಡಿಸಿದವು. ಆದರೆ ಹೆಚ್.​ಡಿ ಕುಮಾರಸ್ವಾಮಿ ಅಧಿಕಾರವನ್ನು ಉಳಿಸಿಕೊಳ್ಳಲಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಹರಿಹಾಯ್ದರು.

ಕುತಂತ್ರ ಮಾಡಿ ರಾಹುಲ್ ಗಾಂಧಿ ಅವರನ್ನ ಲೋಕಸಭೆ  ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ- ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ,  ಕುತಂತ್ರ ಮಾಡಿ ರಾಹುಲ್ ಗಾಂಧಿ ಅವರನ್ನ ಲೋಕಸಭೆ  ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಬಿಜೆಪಿಯ ಕುತಂತ್ರಕ್ಕೆ ನಾವು ಹೆದರಲ್ಲ, ಹೋರಾಟ ಮಾಡುತ್ತೇವೆ. ಬಿಜೆಪಿ ನಡೆ ವಿರುದ್ಧ ಹೋರಾಟ ಮಾಡಲು ನಾವು ತಯಾರಾಗಿದ್ದೇವೆ ಎಂದು  ಹೇಳಿದರು.

ಬಿಜೆಪಿ ವಿರೋಧ ಪಕ್ಷಗಳನ್ನು ದುರ್ಬಲ ಮಾಡುವ ಕೆಲಸ ಮಾಡುತ್ತಿದೆ. ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ವಸ್ತು ಖರೀದಿ ಮಾಡಬಹುದು, ಆದರೆ ಧೈರ್ಯ ಖರೀದಿಸಲು ಆಗಲ್ಲ. ಮೋದಿ ನಾನು ಬಡವ ಅಂತಾರೆ, ಮೋದಿಗಿಂತ ಬಡವ ನಾನು. ಪ್ರಧಾನಿ ಮೋದಿ ಕಾಯಕವೇ ಕೈಲಾಸ ಎಂದು ಹೇಳುತ್ತಾರೆ. ಕಾಯಕ ಮಾಡೋದು ನಾವು, ಕೈಲಾಸದಲ್ಲಿ ಇರೋದು ಮೋದಿ ಎಂದು ಖರ್ಗೆ ತೀವ್ರ ವಾಗ್ದಾಳಿ ಮಾಡಿದರು.

Key words: Rahul Gandhi’s -voice -disqualifying – member – parliament – DK Shivakumar