ಪಂಜಾಬ್ ತಂಡಕ್ಕೆ ಕನ್ನಡಿಗ ರಾಹುಲ್ ‘ಕಿಂಗ್’ !

ಬೆಂಗಳೂರು, ಡಿಸೆಂಬರ್ 20, 2019 (www.justkannada.in):

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಕರ್ನಾಟಕದ ಕೆ.ಎಲ್.ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಕಳೆದ ಆವೃತ್ತಿಯ ಹರಾಜಿನಲ್ಲಿ ಪಂಜಾಬ್ ತಂಡ 11 ಕೋಟಿ ರೂ. ನೀಡಿ ರಾಹುಲ್ ಅವರನ್ನು ಖರೀದಿಸಿತ್ತು. ಈ ಬಾರಿ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೆ.ಎಲ್. ರಾಹುಲ್ ಗೆ ಪಂಜಾಬ್ ತಂಡದ ನಾಯಕನ ಪಟ್ಟ ಕಟ್ಟಲಾಗಿದೆ.

ಪಂಜಾಬ್ ತಂಡದ ಮುಖ್ಯ ಕೋಚ್ ಮತ್ತು ನಿರ್ದೇಶಕ ಅನಿಲ್ ಕುಂಬ್ಳೆ, ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಮುಗಿದ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕರ್ನಾಟಕದ ಅನುಭವಿ ಆಟಗಾರ ಕೆ.ಎಲ್. ರಾಹುಲ್ ಪಂಜಾಬ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.