ರಾಯಚೂರು ಐಐಐಟಿಗೆ ಕೇಂದ್ರದ ಅಸ್ತು: ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ…

kannada t-shirts

ರಾಯಚೂರು,ಸೆಪ್ಟಂಬರ್,23,2020(www.justkannada.in): ರಾಯಚೂರು ಐಐಐಟಿಗೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಕೇಂದ್ರ ಸರ್ಕಾರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ ಸಲ್ಲಿಸಿದ್ದಾರೆ.jk-logo-justkannada-logo

ಈ ಕುರಿತು ಪ್ರತಿಕ್ರಿಯಿಸಿರುವ ಲಕ್ಷ್ಮಣ್ ಸವದಿ, ರಾಯಚೂರು ಸೇರಿದಂತೆ ದೇಶದ ಐದು ಕಡೆಗಳಲ್ಲಿ ಕಾರ್ಯ ನಿರ್ವಹಿಸಲಿರುವ ಇಂಡಿಯನ್ ಇನಿಸ್ಟಿಟ್ಯೂಟ್ ಆಫ್ ಇನ್‍ಫಾರ್ಮೇಷನ್ ಟೆಕ್ನಾಲಜಿ  (ಐಐಐಟಿ)ಗಳಿಗೆ ರಾಷ್ಟ್ರೀಯ ಸಂಸ್ಥೆಗಳ ಸ್ಥಾನಮಾನ ನೀಡುವ ವಿಧೇಯಕವನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿರುವುದರಿಂದ ರಾಯಚೂರಿನ ಐಐಐಟಿ ಸಂಸ್ಥೆಯ ಚಟುವಟಿಕೆಗಳಿಗೆ ಹೆಚ್ಚಿನ ಚಾಲನೆ ಸಿಕ್ಕಿದಂತಾಗಿರುವುದು ಅತ್ಯಂತ ಸಂತೋಷದ ಸಂಗತಿ.  ಈ ಬಗ್ಗೆ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ಐಐಐಟಿಯನ್ನು ಅತೀ ಶೀಘ್ರವಾಗಿ ಕಾರ್ಯಾರಂಭಿಸಬೇಕೆಂಬುದು ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ಉದ್ದೇಶವಾಗಿತ್ತು.  ಈ ನಿಟ್ಟಿನಲ್ಲಿ ಕಳೆದ ಮಾರ್ಚ್‍ನಲ್ಲಿಯೇ ಲೋಕಸಭೆಯಲ್ಲಿ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಗಿದ್ದು, ಈಗ ರಾಜ್ಯಸಭೆಯಲ್ಲೂ ಈ ವಿಧೇಯಕವನ್ನು ಅಂಗೀಕರಿಸಿರುವುದರಿಂದ ರಾಯಚೂರಿನ ಐಐಐಟಿಯು ಸಂಪೂರ್ಣ ಸಾಕಾರಗೊಂಡಂತಾಗಿದೆ.  ಈ ಬಗ್ಗೆ ಆಸಕ್ತಿವಹಿಸಿ ವಿಶೇಷ ಪ್ರಯತ್ನ ನಡೆಸಿದ ಪ್ರಧಾನಿ  ನರೇಂದ್ರ ಮೋದಿಜೀ, ಕೇಂದ್ರದ ಶಿಕ್ಷಣ ಸಚಿವರಾದ ರಮೇಶ್ ಪೋಖ್ರಿಯಾಲ್, ಗೃಹ ಸಚಿವರಾದ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ನಾನು ವಂದನೆಗಳನ್ನು ತಿಳಿಸುವುದಾಗಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.raichur-iiit-central-govrnament-congratulations-dcm-lakshman-savdi

ಹಾಗೆಯೇ ಈ ಐಐಐಟಿ ಗೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಕರ್ನಾಟಕದ ಶೈಕ್ಷಣಿಕ ಕ್ಷೇತ್ರವು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೌರವಕ್ಕೆ ಪಾತ್ರವಾಗಿದೆ. ಐಐಐಟಿಗಳಿಗೆ ಪದವಿಯಿಂದ ಹಿಡಿದು ಪಿಹೆಚ್.ಡಿ.ವರೆಗೆ ವಿವಿಧ ಉನ್ನತ ಶಿಕ್ಷಣಗಳ ಪದವಿಗಳನ್ನು ನೀಡುವ ಕಾನೂನುಬದ್ಧ ಅರ್ಹತೆಯು ಈ ಮಸೂದೆಯಿಂದ ಸಿಕ್ಕಿದಂತಾಗಿದೆ. ನಮ್ಮ ರಾಜ್ಯಕ್ಕೆ ಕೇಂದ್ರದ ವರದಾನವಾಗಿರುವ ಈ ಮಹತ್ವಪೂರ್ಣ ಶಿಕ್ಷಣ ಕೇಂದ್ರವು ಯಶಸ್ವಿಯಾಗಿ ಕೆಲಸ ನಿರ್ವಹಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಕ್ಕೆ ನಮ್ಮ ರಾಜ್ಯ ಸರ್ಕಾರವೂ ಸಂಪೂರ್ಣ ಬದ್ಧವಾಗಿದೆ ಎಂದು ಲಕ್ಷ್ಮಣ್ ಸವದಿ ಹರ್ಷ ವ್ಯಕ್ತಪಡಿಸಿದ್ದಾರೆ.

Key words: Raichur – IIIT-central govrnament- Congratulations – DCM -Lakshman Savdi.

website developers in mysore