ಬೆಂಗಳೂರಿನಲ್ಲಿ ಮಳೆಹಾನಿ ವಿಚಾರ: ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ-ಡಿಸಿಎಂ ಅಶ್ವಥ್ ನಾರಾಯಣ್…

ಬೆಳಗಾವಿ,ಅಕ್ಟೋಬರ್,24,2020(www.justkannada.in):  ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾದ ಹಿನ್ನೆಲೆ ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.jk-logo-justkannada-logo

ಬೆಳಗಾವಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,  ನಗರದಲ್ಲಿ ಬಯಲು ಪ್ರದೇಶ ಇರುವುದಿಲ್ಲ ಹಾಗೂ ಕಟ್ಟಡ ನಿರ್ಮಾಣ ಇವೆಲ್ಲವೂ ಪ್ರವಾಹ ಸ್ಥಿತಿ ನಿರ್ಮಾಣವಾಗಲು ಕಾರಣ. ಇಂಗು ಗುಂಡಿಗಳ ನಿರ್ಮಾಣ. ಮಳೆ ನೀರಿನ ಸಂಗ್ರಹ ಕಾರ್ಯ ಇವೆಲ್ಲಾ ಆದಾಗ ಮಾತ್ರ ಸಮಸ್ಯೆ ಬಗೆಹರಿಯಲು ಸಾಧ್ಯ. ಹೀಗಾಗಿ ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.rain-bangalore-action-permanent-relief-dcm-ashwath-narayan

ರಾಜಕಾಲುವೆ, ಕೆರೆಗಳ ಅಕ್ಕಪಕ್ಕದಲ್ಲಿ ಸಮಸ್ಯೆಯಾಗಿದೆ. ಬಿಬಿಎಂಪಿ ಸಾಕಷ್ಟು ಕೆಲಸ ಮಾಡಿದೆ. ಆದರೆ ಇನ್ನಷ್ಟು ಸುಧಾರಣೆ ಆಗಬೇಕಿದೆ. ಮಳೆಯಿಂದ ಹಾನಿಗೊಳಗಾದ ಕುಟುಂಬಸ್ಥರಿಗೆ ಎನ್ ಡಿಆರ್ ಎಫ್ ಸರ್ಕಾರದ ಮಾರ್ಗಸೂಚಿಯಂತೆ ನೆರವು ನೀಡಲಾಗುತ್ತಿದೆ ಎಂದು ಅಶ್ವಥ್ ನಾರಾಯಣ್ ತಿಳಿಸಿದರು.

Key words: Rain –Bangalore-Action – permanent relief-DCM- Ashwath Narayan.