ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಒತ್ತುವರಿಯಿಂದಾಗಿ ಇಂತಹ ಪರಿಸ್ಥಿತಿ ನಿರ್ಮಾಣ- ಸಿಎಂ ಬಸವರಾಜ ಬೊಮ್ಮಾಯಿ.

ಮೈಸೂರು,ಸೆಪ್ಟಂಬರ್,6,2022(www.justkannada.in):  ಮಳೆ ಸುರಿಯುತ್ತಿರುವ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವುದು ದುರ್ದೈವವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಬಾರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. 90 ವರ್ಷಗಳ ಬಳಿಕ ಈ ಬಾರಿ ಭಾರೀ ಪ್ರಮಾಣದ ಮಳೆ ಸುರಿದಿದೆ. ಈ ರೀತಿ ಆದಾಗ ಸರ್ಕಾರದ ಜೊತೆ ಕೈ ಜೋಡಿಸಿ ಪರಿಹಾರ ಕಾರ್ಯಗಳಿಗೆ ಮುಂದಾಗಬೇಕಿತ್ತು. ಅದು ಬಿಟ್ಟು ಎಲ್ಲದಕ್ಕೂ ಸರ್ಕಾರ ಕಾರಣ ಎಂಬಂತೆ ಆರೋಪಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಒತ್ತುವರಿ, ರಾಜಕಾಲುವೆ, ಕೆರೆಗಳ ಒತ್ತುವರಿ ಪರಿಣಾಮ ಇಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಆದರೂ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.coronavirus-vaccine-tough-action-home-minister-basavaraja-bommai

ಬೆಂಗಳೂರಿನ 9 ವಲಯಗಳ ಪೈಕಿ 2 ವಲಯಗಳಲ್ಲಿ ಮಾತ್ರ ಮಳೆಯಿಂದ ಹೆಚ್ಚಿನ ತೊಂದರೆಯಾಗಿದೆ. ಆದರೆ ಇಡೀ ಬೆಂಗಳೂರಿಗೆ ತೊಂದರೆಯಾಗಿದೆ ಎಂದು ಬಿಂಬಿಸಲಾಗುತ್ತಿದೆ. ತೊಂದರೆಗೊಳಗಾಗಿರುವ ಎರಡು ವಲಯಗಳ ಪೈಕಿ ಒಂದು ವಲಯದಲ್ಲಿ ಪರಿಸ್ಥಿತಿ ‌ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿವೆ. ಎಲ್ಲ ಕೆರೆಗಳು ಕೋಡಿ ಬಿದ್ದಿರುವುದರಿಂದ ನಿರಂತರವಾಗಿ ನೀರು ಹರಿಯುತ್ತಿದೆ. ಅಲ್ಲದೇ ರಾಜಕಾಲವೆ, ಕೆರೆಗಳ ಒತ್ತುವರಿ ಕಾರಣದಿಂದಲೂ ಆ ಭಾಗದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಮುಂಬರುವ ದಿನಗಳಲ್ಲಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words:  rain-Bangalore-CM Bommai -against -Congress.