ಬೆಂಗಳೂರಿನಲ್ಲಿ ಮಳೆ ಅವಾಂತರ: ನಷ್ಟ ಆಗಿರುವ ಶೇ.75 ರಷ್ಟು ಪರಿಹಾರ ನೀಡುವಂತೆ ಹೆಚ್.ಡಿಕೆ ಆಗ್ರಹ.

Promotion

ಬೆಂಗಳೂರು,ಮೇ,20,2022(www.justkannada.in): ಕಳೆದ ಒಂದುವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನರು ತತ್ತರಿಸಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಮಳೆಯ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಠಿಸಿದ್ದು ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿನ್ನೆಲೆಯಲ್ಲಿ ಮಳೆಹಾನಿಯಿಂದ ತೊಂದರೆಗೊಳಗಾದವರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಬೆಂಗಳೂರಿನಲ್ಲಿ ಮಳೆ ಅವಾಂತರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಪರಿಹಾರ ಕೊಡಬೇಕು. ನಷ್ಟ ಆಗಿರುವ ಶೇ.75 ರಷ್ಟು ಪರಿಹಾರ ನೀಡಬೇಕು. ಅದರಲ್ಲೂ ದುಡ್ಡು ಹೊಡೆಯಲು ನೋಡುತ್ತಾರೆ.  ಹಣ ಹೊಡೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

Key words: Rain-Bangalore-HD kumaraswamy- demands-compensation