ಧಾರಾಕಾರ ಮಳೆ: ಬೆಂಗಳೂರು –ಮೈಸೂರು ಹೆದ್ದಾರಿ ಬ್ಲಾಕ್: ಫುಲ್ ಟ್ರಾಫಿಕ್ ಜಾಮ್.

ಆಗಸ್ಟ್,29,2022(www.justkannada.in):  ರಾಮನಗರ  ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದು, ರಾಮನಗರದ ಕನಕಪುರ ‌ಸರ್ಕಲ್ ಬಳ ಜಲಾವೃತಗೊಂಡ ಪರಿಣಾಮ ಬೆಂಗಳೂರು ಮೈಸೂರು ಸಂಪರ್ಕ ಕಡಿತಗೊಂಡಿದೆ.

ಮೈಸೂರು ರಸ್ತೆಯ ಮಾರ್ಗ ಬದಲಾವಣೆ ಮಾಡಲಾಗಿದ್ದು ಹಾರೋಹಳ್ಳೀ- ಕನಕಪುರ ಮಾರ್ಗದಲ್ಲಿ ಸಂಚಾರ ಮಾಡಬೇಕಿದೆ.   ಬೆಂಗಳೂರು-ಮೈಸೂರು ಹೆದ್ದಾರಿ ಬ್ಲಾಕ್ ಆದ ಹಿನ್ನೆಲೆ ಮೈಸೂರು ಹೈವೇಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿ ವಾಹನಗಳು ಕಿಲೋಮೀಟರ್ ಗಟ್ಟಲೇ ದೂರ ನಿಂತಿವೆ.

ಇನ್ನು  ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಜಮೀನು, ಮನೆಗಳು ಜಲಾವೃತಗೊಂಡಿದ್ದು, ರಾಮನಗರ ಪಟ್ಟಣ, ಅರ್ಕೇಶ್ವರ ಕಾಲೋನಿ ಮುಳುಗಡೆಯಾಗಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ.

 ರಾಮನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಳೆಹಾನಿ ಪರಿಶೀಲನೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತೊಡಗಿದ್ದು,  ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಮುಖ್ಯ ಕಾರ್ಯರ್ದಶಿ ಮತ್ತು ರಾಮನಗರ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಕುಮಾರಸ್ವಾಮಿ, ನೀರಿನಲ್ಲಿ ಸಿಲುಕಿಕೊಂಡಿರುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ತಕ್ಷಣ ಎರಡು ಬೋಟ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Key words: rain-Bangalore-Mysore- Highway- Block-Traffic Jam.