ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್: ಮಳೆ ಹಾನಿ ಪ್ರದೇಶಗಳ ವೀಕ್ಷಣೆ.

Promotion

ಬೆಂಗಳೂರು,ಮೇ,19,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ  ಮಹಾಮಳೆಗೆ ಜನರು ಸಂಕಷ್ಟಕ್ಕೆ ಸಿಲುಕಿದ್ದು ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಖುದ್ದು ಸಿಟಿ ರೌಂಡ್ಸ್ ಹಾಕಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಮಳೆ  ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಟಿ ರೌಂಡ್ಸ್ ಮಾಡುತ್ತಿದ್ದು, ​​​​​ ಮಳೆ ಹಾನಿ ಸಂಬಂಧ ಸ್ಥಳೀಯರಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ. ಈ ನಡುವೆ ಇದೀಗ ಸಿಎಂ ಬೊಮ್ಮಾಯಿ ಮಹಾಲಕ್ಷ್ಮಿ ಲೇಔಟ್ ನ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಮುಂದ ಜನರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಸಚಿವರಾದ ಗೋಪಾಲಯ್ಯ,  ವಿ.ಸೋಮಣ್ಣ, ಶಾಸಕ ಭೈರತಿ ಸುರೇಶ್, ಎಸ್.ಆರ್ ವಿಶ್ವನಾಥ್ ಸಾಥ್ ನೀಡಿದ್ದಾರೆ. ಬೆಂಗಳೂರು ನಗರ ಪೂರ್ವ ಪಶ್ಚಿಮ ವಲಯಗಳಲ್ಲಿ ಸಿಎಂ ನಗರ ಪ್ರದಕ್ಷಿಣೆ ಹಾಕುತ್ತಿದ್ದಾರೆ.

Key words: rain-CM Bommai -City Rounds – Bangalore.