ವಿಶ್ವಕಪ್ ಕ್ರಿಕೆಟ್: ಹ್ಯಾಟ್ರಿಕ್ ಗೆಲುವಿನ ಕನಸಿಗೆ ತಣ್ಣೀರೆರೆಚಿದ ಮಳೆ

Promotion

ಲಂಡನ್, ಜೂನ್ 14, 2019 (www.justkannada.in): ಭಾರಿ ಮಳೆ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ಪಂದ್ಯವನ್ನು ರದ್ದುಪಡಿಸಲಾಗಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಗಿದೆ. ಭಾರತ ಆಡಿದ 3 ಪಂದ್ಯಗಳಲ್ಲಿ 2 ಗೆಲುವು ಕಂಡಿದ್ದು, ಒಂದು ಪಂದ್ಯ ರದ್ದಾಗಿದೆ.

ನ್ಯೂಜಿಲೆಂಡ್ ಆಡಿದ 4 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯ ರದ್ದಾಗಿದೆ. ಮೊದಲೆರಡು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳ ವಿರುದ್ಧ ಭರ್ಜರಿ ಜಯ ಗಳಿಸಿದ್ದ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡದ ವಿರುದ್ಧ ಜಯಗಳಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿತ್ತು.

ಆದರೆ, ಮಳೆಯಿಂದಾಗಿ ಪಂದ್ಯ ರದ್ದಾಗಿ ಕನಸು ನುಚ್ಚುನೂರಾಗಿದೆ. ಬಿಟ್ಟುಬಿಡದೇ ಮಳೆಯಾಗುತ್ತಿರುವುದರಿಂದ 4 ಪಂದ್ಯಗಳು ರದ್ದಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿದೆ.