ಕೆಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳ: ನದಿ ಪಾತ್ರದಲ್ಲಿ ಪ್ರವಾಹ ಭೀತಿ.

ಮಂಡ್ಯ,ಅಕ್ಟೋಬರ್,26,2021(www.justkannada.in):  ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ, ಕೆ ಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.

ನೀರು ಹರಿದುಬರುತ್ತಿರುವ ಹಿನ್ನೆಲೆ ಕೆ ಆರ್ ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ 10 ರಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ.40000-cusec-water-release-krs-dam-flooding-role-river-caveri

ಹೀಗಾಗಿ ಕಾವೇರಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿ ನೀರಾವರಿ ಇಲಾಖೆಯ ಅಧಿಕಾರಿಗಳು ಪತ್ರಿಕಾ‌ ಪ್ರಕಟಣೆ ಹೊರಡಿಸಿದ್ದಾರೆ.

Key words: rain- Increase – KRS reservoir -inflow -rate